ಕಲ್ಲಂಗಡಿಯಲ್ಲಿ ಗಾಂಧೀಜಿ,ರಾಜ್ ಕುಮಾರ್ ,ಕುವೆಂಪು,ಚನ್ನಮ್ಮ…!!!

ಬೆಳಗಾವಿಯ ಕ್ಲಬ್ ರಸ್ತೆಯ ಹ್ಯುಂ ಪಾರ್ಕಿನಲ್ಲಿ ತೋಟಗಾರಿಕೆ ಇಲಾಖೆ ಫಲ ಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ.ಕಲ್ಲಂಗಡಿಯಲ್ಲಿ ಡಾ.ರಾಜ್ ಕುಮಾರ್,ಗಾಂಧಿಜಿ,ಚನ್ನಮ್ಮ,ರಾಯಣ್ಣನ ಭಾವಚಿತ್ರಗಳನ್ನು ಮೂಡಿಸಲಾಗಿದೆ. ಫಲಪುಷ್ಪ ಪ್ರದರ್ಶನದಲ್ಲಿ ಅಪ್ಪು ಕಟೌಟ್,ಎಲ್ಲರ ಗಮನ ಸೆಳೆಯುತ್ತಿದೆ.

ಬೆಳಗಾವಿ, ನ.18 ಬೆಳಗಾವಿಯ ಫಲ ಪುಷ್ಪ ಪ್ರದರ್ಶನ ಬೆಂಗಳೂರು ಲಾಲ್ಬಾಗ್ ಮಾದರಿಯಲ್ಲಿ ಏರ್ಪಡಿಸಲಾಗಿದೆ. ವಿವಿಧ ಮಾದರಿಯ ಫಲ ಪುಷ್ಪಗಳು, ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗಳನ್ನು ಕೂಡಾ ನಿರ್ಮಿಸಲಾಗಿದೆ. ಸ್ಥಳೀಯರು ಫಲ ಪುಷ್ಪಗಳ ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದೆ ಮಂಗಳಾ ಅಂಗಡಿ ಅವರು ತಿಳಿಸಿದರು.

ಜಿಲ್ಲಾ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ್) ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ) ವತಿಯಿಂದ ಶುಕ್ರವಾರ (ನ.18) ನಗರದ ಕ್ಲಬ್ ರೋಡ್ ಹ್ಯೂಮ್ ಪಾರ್ಕ್ ನಲ್ಲಿ ಏರ್ಪಡಿಸಲಾಗಿದ್ದ, 63ನೇ ಫಲ-ಪುಷ್ಪ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನ ಅದ್ಭುತವಾಗಿ ಏರ್ಪಡಿಲಾಗಿದೆ. ಜಿಲ್ಲೆಯ ಎಲ್ಲರೂ ಇದರ ಉಪಯೋಗ ಪಡೆಯಬೇಕು. ವಿವಿಧ ಮಾದರಿಯ ಪುಷ್ಪ ಫಲಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರು ಅವಶ್ಯವಿರುವ ಫಲ, ಸಸ್ಯಗಳು ಹಾಗೂ ವಸ್ತುಗಳನ್ನು ಖರೀದಿಸುವ ಮೂಲಕ ತೋಟಗಾರಿಕೆ ಉತ್ಪನ್ನಗಳಿಗೆ ಉತ್ತೇಜನ ನೀಡಬೇಕು ಎಂದು ಸಂಸದೆ ಮಂಗಳಾ ಅಂಗಡಿ ಅವರು ತಿಳಿಸಿದರು.

ಈ ವೇಳೆ ವಿವಿಧ ಮಾದರಿಯ ಫಲ ಪುಷ್ಪಗಳನ್ನು ವೀಕ್ಷಿಸಿ, ಮಾತನಾಡಿದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ರಾಜ್ಯದ ವಿವಿಧ ಭಾಗಗಳಿಂದ ಸುಮಾರು 30 ಮಳಿಗೆಗಳು ಆಗಮಿಸಿದೆ. ಸಾರ್ವಜನಿಕರು ಫಲಪುಷ್ಪ ಖರೀದಿಸುವ ಮೂಲಕ ಪ್ರದರ್ಶನ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅನೀಲ ಬೆನಕೆ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಹಾಗೂ ಮತ್ತಿತರ ಅಧಿಕಾರಿಗಳು ಫಲಪುಷ್ಪ ಪ್ರದರ್ಶನದಲ್ಲಿ ಉಪಸ್ಥಿತರಿದ್ದರು.
***

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *