Breaking News

ಕ್ವಾರಂಟೈನ್ ಇರುವವರ ಮೇಲೆ ತೀವ್ರ ನಿಗಾ ವಹಿಸಲು ಸೂಚನೆ

 

ಬೆಳಗಾವಿ,  ಕ್ವಾರಂಟೈನ್ ನಲ್ಲಿ ಇರುವವರು ಯಾರೂ ಸ್ಟ್ಯಾಂಪಿಂಗ್ ನಿಂದ ತಪ್ಪಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಮತ್ತು ಗೃಹ ಸಂಪರ್ಕ ತಡೆ(ಹೋಮ್ ಕ್ವಾರಂಟೈನ್ )ಯಲ್ಲಿ ಇರುವವರ ಮೇಲೆ ತೀವ್ರ ನಿಗಾ ಇಡಬೇಕು.
ಈ ಬಗ್ಗೆ ಕರ್ತವ್ಯ ಲೋಪ ಎಸಗುವವರು ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣ ಅಮಾನತುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ್ ಘೋಷ್ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಶನಿವಾರ (ಏ.೪) ನಡೆದ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಪಡಿತರ ಧಾನ್ಯ ವಿತರಣೆ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ‌ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ವಹಿಸಬೇಕು.
ಹಾಲು ವಿತರಣೆ ಹೊಣೆಗಾರಿಕೆಯನ್ನು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನೀಡಲಾಗಿದೆ. ಹಾಲು ವಿತರಣೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸಮರ್ಪಕವಾಗಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜನಸಂದಣಿ ನಿಯಂತ್ರಿಸಲು ಸೂಚನೆ:

ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿಯೂ ಸರ್ಕಾರ ಅಥವಾ ಜಿಲ್ಲಾಡಳಿತದ ಗಮನಕ್ಕೆ ಬಾರದೇ ಯಾರಾದರೂ ಉಳಿದುಕೊಂಡಿದ್ದರೆ ಅಂತಹವರನ್ನು ಪತ್ತೆ ಮಾಡಿ ಸೂಕ್ತ ವೈದ್ಯಕೀಯ ತಪಾಸಣೆ ನಡೆಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲಾಕ್ ಡೌನ್ ಉಲ್ಲಂಘಿಸಿ ಕೆಲ ಕಡೆ ಜನಸಂದಣಿ ಕಂಡುಬಂದರೆ ಪ್ರಕರಣ ದಾಖಲಿಸಬೇಕು.
ಪಡಿತರ ವಿತರಣೆ, ಉಚಿತ ಹಾಲು ವಿತರಣೆ ಮತ್ತಿತರ ಸಂದರ್ಭದಲ್ಲಿ ಜನಸಂದಣಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಸಹಜ ಸಾವುಗಳು ಸಂಭವಿಸಿದರೂ ಮಾಹಿತಿಯನ್ನು ಕಲೆ ಹಾಕಬೇಕು. ಏನಾದರೂ ಸಂದೇಹಗಳಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು.
ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸಾಧ್ಯವಾದಷ್ಟು ಸ್ಥಳೀಯ ಮಾರುಕಟ್ಟೆಯಲ್ಲಿಯೇ ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಡಾ.ರಾಜೇಂದ್ರ ಹೇಳಿದರು.
ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಸಕಾಲದಲ್ಲಿ ಕಳಿಸಿಕೊಡುವಂತೆ ತಿಳಿಸಿದರು.

ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್ ಅವರು, ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹರಡುವಿಕೆ ತಡೆಗಟ್ಟಲು ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಪೊಲೀಸ್ ಆಯುಕ್ತರಾದ ಬಿ‌.ಎಸ್.ಲೋಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು.
ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ, ಅಶೋಕ ತೇಲಿ, ರವೀಂದ್ರ ಕರಲಿಂಗಣ್ಣವರ, ಎಲ್ಲ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.
****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *