Breaking News

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ. ಭರ್ಜರಿ ತಯಾರಿ…

ಬೆಳಗಾವಿ, -ವಿಧಾನಮಂಡಳದ ಚಳಿಗಾಲ  30 ರವರೆಗೆ ನಡೆಯಲಿದ್ದು, ಸಚಿವರು, ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಪ್ರತಿವರ್ಷದಂತೆ ಅತ್ಯುತ್ತಮ ವಸತಿ ಮತ್ತಿತರ ಸೌಕರ್ಯಗಳನ್ನು ಒದಗಿಸುವ ಅಗತ್ಯವಿದೆ. ಆದ್ದರಿಂದ ಈ ನಿಟ್ಟಿನಲ್ಲಿ ನಗರದ ಎಲ್ಲ ಹೋಟೆಲ್ ಮಾಲೀಕರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಬೆಳಗಾವಿ ಚಳಿಗಾಲ ವಿಧಾನಮಂಡಳ ಅಧಿವೇಶನದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶನಿವಾರ(ನ.19) ನಡೆದ ನಗರದ ಹೋಟೆಲ್ ಮಾಲೀಕರುಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿವೇಶನ ಆರಂಭಕ್ಕೆ ಸರಿಯಾಗಿ ಒಂದು ತಿಂಗಳು ಕಾಲಾವಕಾಶ ಇರುವುದರಿಂದ ಸ್ವಚ್ಛತೆ ಮತ್ತಿತರ ಕೆಲಸಗಳಿಗೆ ಆದ್ಯತೆ ನೀಡಬೇಕು. ಅತಿಥಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಉತ್ತಮ ಸೇವೆಯನ್ನು ಒದಗಿಸಲು ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಚಳಿಗಾಲ ಅಧಿವೇಷ ಅವಧಿಯಲ್ಲಿ ಎಲ್ಲ ಹೋಟೆಲ್ ಕೊಠಡಿಗಳನ್ನು ಜಿಲ್ಲಾಡಳಿತ ಪಡೆದುಕೊಳ್ಳುವುದರಿಂದ ಆ ಅವಧಿಯಲ್ಲಿ ಕೊಠಡಿಗಳನ್ನು ಬೇರೆಯವರಿಗೆ ಬುಕ್ ಮಾಡಬಾರದು.

ಸಚಿವರು, ಶಾಸಕರು, ಗಣ್ಯರು, ಉನ್ನತ ಅಧಿಕಾರಿಗಳು ಆಗಮಿಸಲಿದ್ದು, ಎಲ್ಲರಿಗೂ ಸಮರ್ಪಕ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲ ಹೋಟೆಲ್ ಮಾಲೀಕರು ಸಹಕರಿಸಬೇಕು ಎಂದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ ಮತ್ತಿತರರು ಉಪಸ್ಥಿತರಿದ್ದರು.
****

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *