Breaking News
Home / Breaking News / ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ…

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ…

ಬೆಳಗಾವಿ- ಬೆಳಗಾವಿ ಗಡಿವಿವಾದ ಮಾನ್ಯ ಸುಪ್ರೀಂ ಕೋರ್ಟಿನಲ್ಲಿ ಅಂತಿಮ ವಿಚಾರಣೆಗೆ ಬರುವ ಸಂಧರ್ಭದಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರು ಮತ್ತೆ ಕಾಲು ಕೆದರಿ ಜಗಳ ಮಾಡುವ ಚಾಳಿಯನ್ನು ಮುಂದುರೆಸಿದ್ದಾರೆ‌‌.

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಭಾಷಿಕ ಪುಂಡರು ಪುಂಡಾಟಿಕೆ ಪ್ರದರ್ಶನ ಮಾಡಿದ್ದಾರೆ.ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟಿಕೆ ಶುರು ಮಾಡಿದ ಮರಾಠಿ ಭಾಷಿಕ ಪುಂಡರು ಗದ್ದಲ ಗಲಾಟೆ ನಡೆಸಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹುನ್ನಾರ ನಡೆಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ‌ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆಗೆ ದಿನಗಣನೆ ಶುರುವಾಗಿದೆ.ದೌಂಡ್ ಗ್ರಾಮದ ಬಳಿ, ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳೆದು ಪುಂಡಾಟಿಕೆ ನಡೆಸಿದ್ದಾರೆ.ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ನಿಪ್ಪಾಣಿ – ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳೆಯಲಾಗಿದೆ.ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು ಬಸ್ಸಿಗೆ ಮಸಿ ಬಳೆದಿದ್ದಾರೆ.

ಜತ್ತ ತಾಲೂಕಿನ 40 ಗ್ರಾಮ ಕರ್ನಾಟಕಕ್ಕೆ ಸೇರಬೇಕೆಂದು ಠರಾವು ಹೊರಡಿಸಿದ್ದರು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮರಾಠಿ ಭಾಷಿಕ ಪುಂಡರು,ಮಹಾರಾಷ್ಟ್ರ ನಮ್ಮ ಹಕ್ಕಿಂದು ಯಾರಪ್ಪಂದಲ್ಲ ಎಂದು ಘೋಷಣೆ ಕೂಗಿದ್ದಾರೆ‌‌ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ.

Check Also

ಬೆಳಗಾವಿಯ ನಾಲ್ಕು ಜನ ಯುವತಿಯರು ನೀರು ಪಾಲು

ಬೆಳಗಾವಿ- ಬೆಳಗಾವಿಯಲ್ಲಿ ಘನಘೋರ ದುರಂತ ನಡೆದಿದೆ‌ *ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವುನೊಪ್ಪಿದ್ದಾರೆ. ಕರ್ನಾಟಕ ಮಹಾರಾಷ್ಟ್ರ …

Leave a Reply

Your email address will not be published. Required fields are marked *