ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದು,ಹಿಂಡಲಗಾ ಗ್ರಾಮ ಪಂಚಾಯತಿ ಅದ್ಯಕ್ಷ ನಾಗೇಶ್ ಮನ್ನೋಳಕರ ಅವರನ್ಬು ಬೆಂಗಳೂರಿಗೆ ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿಸಿದ ಬೆನ್ನಲ್ಲಿಯೇ ಇಂದು ಗ್ರಾಮೀಣ ಕ್ಷೇತ್ರದ ಸಾಂಬ್ರಾದಲ್ಲಿ ಬಿಜೆಪಿ ನಾಯಕರ ಸಭೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಸುಳೆಭಾವಿ, ಸಾಂಬ್ರಾ,ಮಾರಿಹಾಳ,ಬಾಳೇಕುಂದ್ರಿ,ಮೋದಗಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಪ್ರಮುಖ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿದ್ದಾರೆ.
ಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗಾಗಿ ಈ ಕ್ಷೇತ್ರದ ಬಿಜೆಪಿ ನಾಯಕರು ಸಂಘಟಿತರಾಗಿ ಬಿಜೆಪಿ ಸಂಘಟನೆಯನ್ನು ಪ್ರಬಲ ಗೊಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ರಮೇಶ್ ಜಾರಕಿಹೊಳಿ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ