Breaking News
Home / Breaking News / ಮಹಾ ಸಚಿವರು ಬೆಳೆಗಾವಿಗೆ ಬಂದ್ರೆ,ಸಭೆಗೆ ನುಗ್ಗುತ್ತೇವೆ…!!

ಮಹಾ ಸಚಿವರು ಬೆಳೆಗಾವಿಗೆ ಬಂದ್ರೆ,ಸಭೆಗೆ ನುಗ್ಗುತ್ತೇವೆ…!!

ಬೆಳಗಾವಿ-ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬೆಳಗಾವಿಗೆ ಆಗಮಸುತ್ತಿರುವ,ಬೆಳಗಾವಿಯ ಶಾಂತಿಯನ್ನು ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾಗುತ್ತದೆ ಎಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸರುವ ಕರವೇ ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡಲೇ ಕ್ರಮ ಜರುಗಿಸಬೇಕು ಮಹಾರಾಷ್ಟ್ರ ಸರ್ಕಾರ ಭಾರತದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದು ಪ್ರಧಾನಿ ಬಳಿ ನಿಯೋಗ ಕೊಂಡೊಯ್ದು ಕೇಂದ್ರ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಲಗಾಮು ಹಾಕುವಂತೆ ಒತ್ತಾಯಿಸಬೇಕು ಎಂದು ದೀಪಕ ಗುಡಗನಟ್ಟಿ ಆಗ್ರಹಿಸಿದ್ದಾರೆ.

ಡಿಸೆಂಬರ್ 3 ರಂದು ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜೆ ಅವರು ಬೆಳಗಾವಿಯಲ್ಲಿ ಸಭೆ ನಡೆಸುವದಾಗಿ, ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಗಣಿಸದಿದ್ದರೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಇಬ್ಬರು ಸಚಿವರು ಬೆಳಗಾವಿಯಲ್ಲಿ ನಡೆಸುವ ಸಭೆಗೆ ನುಗ್ಗುತ್ತೇವೆ ಎಂದು ಕರವೇ ಎಚ್ಚರಿಕೆ ನೀಡಿದೆ.

ಬೆಳಗಾವಿ ಗಡಿವಿವಾದದ ಕುರಿತು ಮಹಾರಾಷ್ಡ್ರ ಸರ್ಕಾರವೇ ಸುಪ್ರೀಂ ಕೋರ್ಟಿನ ಮೆಟ್ಟಲೇರಿದೆ, ಕೋರ್ಟಿನ ತೀರ್ಪು ಬರುವವರೆಗೂ ಕಾಯಬೇಕಾದ ಮಹಾರಾಷ್ಟ್ರ ಸರ್ಕಾರ ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುತ್ತಿದೆ.ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಅದಕ್ಕೂ ಮೊದಲು ಬೆಳಗಾವಿ ಎಂಇಎಸ್ ನಾಯಕರು ಮಹಾರಾಷ್ಟ್ರದ ಇಬ್ಬರು ಸಚಿವರನ್ನು ಬೆಳಗಾವಿಗೆ ಕರೆಯಿಸಿ ಶಾಂತಿಗೆ ಭಂಗ ತರುವ ಹುನ್ನಾರ ನಡೆಸಿದ್ದು, ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿಗೆ ಬರುವಂತೆ ಪತ್ರ ಬರೆದಿರುವ ಎಂಇಎಸ್ ನಾಯಕರನ್ನು ಕೂಡಲೇ ಬಂಧಿಸಬೇಕೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಡಿ ಒತ್ತಾಯಿಸಿದ್ದಾರೆ.

Check Also

ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಕುಮಟಾ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ …

Leave a Reply

Your email address will not be published. Required fields are marked *