ಬೆಳಗಾವಿ-ಡಿಸೆಂಬರ್ 3 ರಂದು ಬೆಳಗಾವಿಗೆ ಭೇಟಿ ನೀಡುವದಾಗಿ ಟ್ವೀಟ್ ಮಾಡಿದ್ದ ಮಹಾರಾಷ್ಟ್ರ ಗಡಿ ಉಸ್ತುವಾರಿ ಮಂತ್ರಿ ಚಂದ್ರಕಾಂತ ಪಾಟೀಲ ಧಿಡೀರ್ ಬೆಳಗಾವಿ ಪ್ರವಾಸವನ್ನು ಮುಂದೂಡಿದ್ದಾರೆ.
ಗಡಿ ವಿಚಾರದಲ್ಲಿ ಕಾಲಕ್ಕೆ ತಕ್ಕಂತೆ ಬಣ್ಣ ಬದಲಾಯಿಸುತ್ತಿರುವ ಮಹಾರಾಷ್ಟ್ರದ ಮಂತ್ರಿಗಳು ಈಗ ಬೆಳಗಾವಿಗೆ ಭೇಟಿ ನೀಡುವ ದಿನಾಂಕ ಮುಂದೂಡಿದ್ದು ಡಿಸೆಂಬರ್ 3 ರ ಬದಲಾಗಿ ಡಿಸೆಂಬರ್ 6 ರಂದು ಬೆಳಗಾವಿಗೆ ಬರುವದಾಗಿ ಟ್ವೀಟ್ ಮಾಡಿದ್ದಾರೆ.
ಡಿಸೆಂಬರ್ 6 ರಂದು ವಿಶ್ವರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಿದ್ದು ಇದರ ನಿಮತ್ಯ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವದಾಗಿ ಮಹಾರಾಷ್ಟ್ರದ ಮಂತ್ರಿ ಚಂದ್ರಕಾಂತ ಪಾಟೀಲ ಇಂದು ರಾತ್ರಿ ಟ್ವೀಟ್ ಮಾಡಿದ್ದಾರೆ.
ನಾಳೆ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಕನ್ನಡಪರ ಸಂಘಟನೆಗಳ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಹಾರಾಷ್ಟ್ರದ ಗಡಿ ಉಸ್ತುವಾರಿ ಮಂತ್ರಿ ಚಂದ್ರಕಾಂತ ಪಾಟೀಲ ಅವರಿಗೆ ಬೆಳಗಾವಿಗೆ ಬಾರದಂತೆ ನಿಷೇಧ ಹೇರಬೇಕೆಂದು ಒತ್ತಾಯಿಸಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ