ಬೆಳಗಾವಿ-ಇತ್ತೀಚಿಗೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಕನ್ನಡ ಧ್ವಜ ಹಾರಿಸಿದ ಯುವಕನ ಮೇಲೆ ಸಹಪಾಠಿಗಳು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುಧ ಟಿಲಕವಾಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಕನ್ನಡ ಧ್ವಜ ಹಾರಿಸಿದ್ದಕ್ಕೆ ಆತನ ಸಹಪಾಠಿಗಳೇ ಹಲ್ಲೆ ಮಾಡಿದ್ದರು. ನೊಂದ ಯುವಕ ಟಿಲಕವಾಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಕಾರಣ ಪೋಲೀಸರು ಮೂವರು ಅಪ್ರಾಪ್ತರು ಒಬ್ಬ ಪ್ರಾಪ್ತ ಯುವಕ ಸೇರಿದಂತೆ ಒಟ್ಟು ನಾಲ್ಕು ಜನರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ನಗರ ಪೋಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ