Breaking News
Home / Breaking News / ಬೆಳಗಾವಿಯಲ್ಲಿ ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಸಿಎಂ ಆದೇಶ.

ಬೆಳಗಾವಿಯಲ್ಲಿ ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಸಿಎಂ ಆದೇಶ.

ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಮತದಾರರ ಪಟ್ಟಿ: ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ : ಸಿಎಂ ಬೊಮ್ಮಾಯಿ*

ಧಾರವಾಡ, ಡಿಸೆಂಬರ್ 02: ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಭಾರತ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.

*

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *