ನವದೆಹಲಿ. ಡಿ.13 : ರಾಜ್ಯದ ಜಲ ಸಂಪನ್ಮೂಲ ಸಚಿವ ಶ್ರೀ ಗೋವಿಂದ ಕಾರಜೋಳ್ ರವರು ಇಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತರ ವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ರು..
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖವತ್ ಅವರ ನಿವಾಸದಲ್ಲಿ ಇಂದು ಮುಂಜಾನೆ ಈ ಮಹತ್ವದ ಸಭೆ ನಡೆಯಿತು.
ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಮಹತ್ವದ ಚರ್ಚೆ ನಡೆಯಿತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಲಾಯಿತು.
ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು ಮಾನ್ಯ ಜಲ ಸಂಪನ್ಮೂಲ ಸಚಿವ ಶ್ರೀ ಗೋವಿಂದ್ ಕಾರಜೋಳ್ ರವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮಹದಾಯಿ ಯೋಜನೆಯ ಅನುಮೋದನೆ ಆದಷ್ಟು ಬೇಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ