Breaking News
Home / Breaking News / ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು

ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು

ಕೋವಿಡ್-೧೯ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಏ.೧೮(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಗ್ರಾಮದ ೭೦ ವರ್ಷದ ವ್ಯಕ್ತಿ(ಪಿ-೧೨೬)ಯನ್ನು ಶನಿವಾರ (ಏ.೧೮) ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 42 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ ಬೆಳಗುಂದಿ ಗ್ರಾಮದವರಾದ ಪಿ-೧೨೬ ಈಗ ಗುಣಮುಖರಾಗಿದ್ದು, ಮರು ಪರೀಕ್ಷೆ ಬಳಿಕವೂ ವರದಿ ನೆಗೆಟಿವ್ ಬಂದಿರುತ್ತದೆ.
ಸರ್ಕಾರದ ಮಾರ್ಗಸೂಚಿಯ ಅನುಸಾರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು:

ಕೋವಿಡ್-೧೯ ಸೋಂಕು ದೃಢಪಟ್ಟ ಬಳಿಕ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾದ ಬಳಿಕ ಇಂದು ಬಿಡುಗಡೆ ಹೊಂದಿದ ವ್ಯಕ್ತಿಯನ್ನು ಆಸ್ಪತ್ರೆಯ ವೈದ್ಯರು ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.

ಬೆಳಗುಂದಿ ಗ್ರಾಮದ ೭೦ ವರ್ಷದ ವ್ಯಕ್ತಿ(ಪಿ-೧೨೬) ಆಸ್ಪತ್ರೆಯಿಂದ ಹೊರಬರುವಾಗ ವೈದ್ಯರು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.
ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಆಂಬ್ಯುಲೆನ್ಸ್ ವರೆಗೆ ಬಂದು ಬೀಳ್ಕೊಡಲಾಯಿತು.
ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಹಾಗೂ ವೈದ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
****

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *