Breaking News

ಪಂಚಮಸಾಲಿ ಸಂಘಟನೆಯಲ್ಲಿ ಗುಂಡು ಪಾಟೀಲರಿಗೆ ಪ್ರಮೋಶನ್..!!

ಬೆಳಗಾವಿ-ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠದ ಪ್ರಥಮ ಜಗದ್ಗುರು ಬಸವ /ಜಯ ಮೃತ್ಯುಂಜಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ರಾಜ್ಯ ಪಂಚಮಸಾಲಿ ಕಾರ್ಯಕಾರಿನಿ ಸಭೆ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆಯಿತು.

ಸಭೆ ಮುಗಿದ ಬಳಿಕ ಪಂಚಮಸಾಲಿ ಸಂಘಟನೆಯ ಕೆಲವು ಪದಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಯಿತು.ಪಂಚಮಸಾಲಿ ಸಂಘಟನೆಯ ಹುಕ್ಕೇರಿ ತಾಲ್ಲೂಕಾ ಅಧ್ಯಕ್ಷರಾಗಿ ಸಂಘಟನೆಯನ್ನು ಬಲಿಷ್ಠಗೊಳಿಸಿದ ಗುಂಡು ಪಾಟೀಲ ಅವರನ್ನು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಯುವ ಘಟಕದ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಶಿವಾಗೌಡ (ಗುಂಡು) ಪಾಟೀಲ್ ಅವರನ್ನು ಶ್ರೀ ಗಳು ಆಯ್ಕೆ ಮಾಡಿ ಘೋಷಣೆ ಮಾಡಿದರು.ಈ ಮೊದಲು ಉತ್ಸಾಹಿ ಕ್ರಿಯಾಶೀಲ ಹುಕ್ಕೇರಿ ತಾಲೂಕಾ ಅಧ್ಯಕ್ಷರಾಗಿ ಹುಕ್ಕೇರಿ ತಾಲೂಕಿನ ಪ್ರತಿ ಹಳ್ಳಿ ಹಳ್ಳಿಗೂ ಶ್ರೀ ಗಳ ಜೊತೆ ಪ್ರತಿ ಮನೆ ಮನೆಗೆ ಸಂಚರಿಸಿ ಪ್ರ ಪ್ರಥಮವಾಗಿ ಹುಕ್ಕೇರಿ ತಾಲೂಕಿನಲ್ಲಿ ಬೃಹತ್ ಸಮಾವೇಶ ಯಶಸ್ವಿಗೊಳಿಸಿದ ನಂತರ ಜಿಲ್ಲೆಯ ಎಲ್ಲಾ ಸಮಾವೇಶಗಳ ಯಶಸ್ಸಿಗೆ ದಿಕ್ಸೂಚಿಯಾಯಿತು ಎಂದು ಶ್ರೀ ಗಳು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮೀಸಲಾತಿ ಸ್ವಾಗತ್ ಸಮೀತಿ ಅಧ್ಯಕ್ಷ ರಾದ ಬಸನಗೌಡ ಪಾಟೀಲ ಯತ್ನಾಳ ಬೆಳಗಾವಿ ಗ್ರಾಮೀಣ ಶಾಸಕಿ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಕಿತ್ತೂರು ಕ್ಷೇತ್ರದ ಶಾಸಕರಾದ ಮಹಾಂತೇಶ್ ದೊಡ್ಡ ಗೌಡರು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಪ್ರಕಾಶ್ ಹುಕ್ಕೇರಿ ಮಾಜಿ ಸಚಿವರಾದ ಎ ಬಿ ಪಾಟೀಲ್, ಶಶಿಕಾಂತ್ ನಾಯಕ್, ಹಾಗೂ ರಾಜ್ಯ ಪದಾಧಿಕಾರಿಗಳು ಹಾಜರಿದ್ದರು

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *