ಬೆಳಗಾವಿ-ರಾಜ್ಯದ ಎರಡನೇಯ ರಾಜಧಾನಿಯಾಗಲಿರುವ ಬೆಳಗಾವಿಗೆ ಈಗ ಎಲ್ಲ ರಾಜಕೀಯ ಪಕ್ಷಗಳು ಮಹತ್ವ ಕೊಡುತ್ತಿವೆ. ಕಾಂಗ್ರೆಸ್ ಪಕ್ಷದ ಚುನಾವಣಾ ಸಮೀತಿಯ ಮೊದಲ ಸಭೆ ಬೆಳಗಾವಿಯಲ್ಲೇ ನಡೆಯಲಿದೆ.
ನಾಳೆ ಭಾನುವಾರ ದಿನಾಂಕ 18 ರಂದು ಸಂಜೆ 5 ಗಂಟೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ, ಕಾಂಗ್ರೆಸ್ ಪಕ್ಷದ ಚುನಾವಣಾ ಸಮೀತಿಯ ಪ್ರಥಮ ಸಭೆ ನಡೆಯಲಿದ್ದು ಭಾನುವಾರ ಬೆಳಗ್ಗೆ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ಬೆಳಗಾವಿಗೆ ಆಗಮಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಎಂಬಿ ಪಾಟೀಲ,ಪರಮೇಶ್ವರ್ ಹಾಗು ಕೆಪಿಸಿಸಿ ಕಾರ್ಯಾಧ್ಯಕ್ಷರು ವಿನಯ ಕುಲಕರ್ಣಿ ಹಾಗು ಚುನಾವಣಾ ಸಮೀತಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಚುನಾವಣಾ ಸಮೀತಿಯ ಮೊದಲ ಸಭೆ ಬೆಳಗಾವಿಯಲ್ಲಿ ನಡೆಯಲಿದ್ದು ಈ ಸಭೆಗೆ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದು ಟಿಕೆಟ್ ಆಕಾಂಕ್ಷಿಗಳು ನಾಳೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಜಬರದಸ್ತ್ ಲಾಭಿ ನಡೆಸುವ ಸಾಧ್ಯತೆ ಇದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ