Breaking News
Home / Breaking News / ಸಾವರ್ಕರ್ ಫೋಟೋ ವಿವಾದ: ವಿಧಾನಸಭೆ ಆವರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸಾವರ್ಕರ್ ಫೋಟೋ ವಿವಾದ: ವಿಧಾನಸಭೆ ಆವರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ- ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಡಿ ಸಾವರ್ಕರ್ ಭಾವಚಿತ್ರ ವಿವಾದ ಪ್ರತಿಭಟನೆಯ ಕಿಡಿ ಹೊತ್ತಿಸಿದೆ. ಮೊದಲ ದಿನವೇ ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಪ್ರಯತ್ನಿಸಿದೆ.

ವಿಧಾನಸಭೆ ಸಭಾಂಗಣದಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿಧಾನಸಭೆಯ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ಶಾಸಕರು ಸುವರ್ಣಸೌಧದ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಜವಾಹರ್ ಲಾಲ್ ನೆಹರೂ, ಕುವೆಂಪು, ವಾಲ್ಮೀಕಿ, ಕನಕದಾಸರು, ದೇವರಾಜ ಅರಸು ಸೇರಿದಂತೆ ಹಲವು ನಾಯಕರ ಚಿತ್ರಗಳನ್ನು ಕೈಯಲ್ಲಿ ಹಿಡಿದು ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *