Breaking News
Home / Breaking News / ಬೆಳಗಾವಿ ದಕ್ಷಿಣದಲ್ಲಿ ಲೈಟ್ , ಗ್ರಾಮೀಣದಲ್ಲಿ ಫೈಟ್…..!!!

ಬೆಳಗಾವಿ ದಕ್ಷಿಣದಲ್ಲಿ ಲೈಟ್ , ಗ್ರಾಮೀಣದಲ್ಲಿ ಫೈಟ್…..!!!

ಬೆಳಗಾವಿಯಲ್ಲಿ ಡಿಸೆಂಬರ್  31 ರಂದು ಅಣ್ಣಪ್ಪಾ ಜವಾರಿ ಊಟ ಆರಂಭ

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ಅವರು ಅಳವಡಿಸಿರುವ ಆಕರ್ಷಕ ಬೀದಿ ದೀಪಗಳು

ಬೆಳಗಾವಿ-ರಾಜ್ಯದ ಯಾವ ಕ್ಷೇತ್ರದಲ್ಲೂ ಈ ರೀತಿಯ ಚುನಾವಣಾ ತಯಾರಿ ನಡೆದಿಲ್ಲ,ಆದ್ರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾತ್ರ ಪವರ್ ಫುಲ್ ಪಾಲಿಟಿಕ್ಸ್ ನಡೆದಿರುವುದು ಸತ್ಯ.

ಬೆಳಗಾವಿ ಜಿಲ್ಲೆಯ ರಾಜಕೀಯ ಕಡುವೈರಿಗಳಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ನಡುವೆ ರಾಜಕೀಯ ಗುದ್ದಾಟ ಶುರುವಾಗಿದೆ.ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ,ನಾಗೇಶ್ ಮನ್ನೋಳಕರ್ ಅವರ ಕಚೇರಿ ಉದ್ಘಾಟನೆಗೆ ಸಾವಿರಾರು ಜನರನ್ನು ಸೇರಿಸಿ ಚುನಾವಣಾ ಪ್ರಚಾರದ ಕಹಳೆ ಊದಿದ ಬೆನ್ನಲ್ಲಿಯೇ,ಲಕ್ಷ್ಮೀ ಹೆಬ್ಬಾಳಕರ ಸಹ ಹೊಸ ಬಾಂಬ್ ಸಿಡಿಸಿ ಸಂಚಲನ ಮೂಡಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರೆ ನಾನು ಗೋಕಾಕ್ ಕ್ಷೇತ್ರದಿಂದ ಸ್ಪರ್ದೆ ಮಾಡಲು ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದೆ. ಇಲೆಕ್ಷನ್ ಘೋಷಣೆ ಆಗಿಲ್ಲ,ಆದ್ರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಾವರ್ ಫುಲ್ ಪಾಲಿಟೀಕ್ಸ್ ನಡೀತಾ ಇದೆ.ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ.ರಮೇಶ್ ಜಾರಕಿಹೊಳಿ ಪರಮಾಪ್ತ ನಾಗೇಶ್ ಮನ್ನೋಳಕರ ಹಿಂಡಲಗಾದಲ್ಲಿ ಕಚೇರಿ ಉದ್ಘಾಟಿಸಿದ ನಂತರ ಈ ಕ್ಷೇತ್ರದ ಇನ್ನೋರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ಧನಂಜಯ ಜಾಧವ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶ್ ಬಾಗ್ ನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಬಾಡೂಟ ಹಾಕಿಸಿ,ನಾಗೇಶ್ ಮನ್ನೋಳಕರ ಅವರಿಗೆ ಟಕ್ಕರ್ ಕೊಡುತ್ತಿದ್ದಾರೆ.ಈ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸಂಜಯ ಪಾಟೀಲ, ಅವರು ಟಿಕೆಟ್ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.ಬಿಜೆಪಿಯ ಬೆಳಗಾವಿ ಜಿಲ್ಲಾಧ್ಯಕ್ಷ ಆಗಿರುವ ಸಂಜಯ ಪಾಟೀಲ ಪಕ್ಷದ ಸಂಘಟನೆಯ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ‌‌‌.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ಅವರು ಆಕರ್ಷಕ ಬೀದಿ ದೀಪಗಳನ್ನು ಅಳವಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿ ಉತ್ತರದಲ್ಲಿ ಮಾಜಿ ಸಚಿವ ಎಬಿ ಪಾಟೀಲ ಅವರು ಕಾಂಗ್ರೆಸ್ ಟಿಕೆಟ್ ಗಾಗಿ ಸಿದ್ರಾಮಯ್ಯ ನವರ ಮೊರೆಹೋಗಿದ್ದಾರೆ.

ಬೆಳಗಾವಿ ದಕ್ಷಿಣದಲ್ಲಿ street ಲೈಟ್ ಗಳು ಎಲ್ಲರ ಗಮನ ಸೆಳೆಯುತ್ತಿದ್ದರೆ, ಬೆಳಗಾವಿ ಗ್ರಾಮೀಣದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ ನಡುವಿನ ಮುಸುಕಿನ ಗುದ್ದಾಟ ಈಗ ಚರ್ಚೆಯ ವಿಷಯವಾಗಿದ್ದು,ಬೆಳಗಾವಿ ಗ್ರಾಮೀಣದಲ್ಲಿ ಈಗ ಸದ್ಯಕ್ಕೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ಈ ಕ್ಷೇತ್ರದಲ್ಲಿ ಎಂದೂ ಕಂಡರಿಯದ ಇಲೆಕ್ಷನ್ ನಡೆಯುವ ಲಕ್ಷಣಗಳು ಕಂಡು ಬಂದಿವೆ.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಚಾರ ಶುರು ಮಾಡಿದ್ದು,ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳಿಕೆ ನೀಡಿ,ಸಾಹುಕಾರ್ ಸವಾಲ್ ಗೆ ಪ್ರತಿ ಸವಾಲ್ ಹಾಕಿದ್ದಾರೆ.ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅರಷಿಣ ಕುಂಕುಮ ಕಾರ್ಯಕ್ರಮ ಹಾಗು ಈ ಕ್ಷೇತ್ರದ ವಿಧ್ಯಾರ್ಥಿಗಳಿಗೆ ಟಿಫಿನ್ ಬಾಕ್ಸ್ ಹಂಚುವ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದ ಓಟ್ ಬ್ಯಾಂಕ್ ಭದ್ರಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *