ಬೆಳಗಾವಿ-ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯಿತು ಈ ಸಭೆಯಲ್ಲಿ ರಾಮದುರ್ಗ ಮಾಜಿ ಶಾಸಕ ಅಶೋಕ್ ಪಟ್ಟಣ ಮತ್ತೋರ್ವ ಆಕಾಂಕ್ಷಿಗೆ ಆವಾಜ್ ಹಾಕಿದ ಘಟನೆ ನಡೆದಿದೆ.
ಎಐಸಿಸಿ ಕಾರ್ಯದರ್ಶಿ ವಿಶ್ವನಾಥ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಾಮದುರ್ಗ ಕ್ಷೇತ್ರದ ಆಕಾಂಕ್ಷಿಗಳ ಅಭಿಪ್ರಾಯ ಆಲಿಸುತ್ತಿರುವಾಗ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಅರ್ಜುನ್ ಗದಿಗೆಪ್ಪ ಗುಡ್ಡದ. ನಾನು ಕುರುಬ ಸಮಾಜಕ್ಕೆ ಸೇರಿದ್ದೇನೆ ಈ ಬಾರಿ ನನಗೆ ಟಿಕೆಟ್ ಕೊಡಿ ಎಂದು ಮನವಿ ಮಾಡಿಕೊಳ್ಳುವ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಶಾಸಕ ಅಶೋಕ ಪಟ್ಟಣ ಅರ್ಜುನ್ ಗಡ್ಡದ್ ಎಂಬುವವರಿಗೆ ಅವಾಜ್ ಹಾಕಿದ ಕಾರಣ ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
ಈ ಸಂಧರ್ಭದಲ್ಲಿ ಅರ್ಜುನ್ ಗಡ್ಡದ್ ಮತ್ತು ಅಶೋಕ ಪಟ್ಟಣ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.ನಂತರ ಮದ್ಯಪ್ರವೇಶಿಸಿದ ಕಾಂಗ್ರೆಸ್ ನಾಯಕರು ಅಶೋಕ ಪಟ್ಟಣ ಬೆಂಬಲಿಗರನ್ನು ಸಮಾಧಾನ ಮಾಡಿದರು.
ಬೆಳಗಾವಿ ವಿಭಾಗದ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ವಿಶ್ವನಾಥ ಅವರ ಎದುರಲ್ಲೇ ಈ ರೀತಿಯ ಗಲಾಟೆ ನಡೆದಿದೆ.ಆಕಾಂಕ್ಷಿಗಳ ಪರಿಷ್ಕೃತ ಪಟ್ಟಿ ಸಿದ್ಧಪಡಿಸಲು ಆಕಾಂಕ್ಷಿಗಳ ಅಭಿಪ್ರಾಯ ಆಲಿಸುವ ಸಂಧರ್ಭದಲ್ಲಿ ಆಕಾಂಕ್ಷಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ