Breaking News

ಪಂಚಮಸಾಲಿ ಸಮಾಜಕ್ಕೆ ಗುಡ್ ನ್ಯೂಸ್ ಕೊಟ್ಟ ಬೊಮ್ಮಾಯಿ

ಬೆಳಗಾವಿ :
ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಮಹತ್ವದ ಘೋಷಣೆಯನ್ನು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ಈ ಕುರಿತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ಮೀಸಲಾತಿ ಹೀಗಿದೆ.

3B to 2Dಗೆ ಪಂಚಮಸಾಲಿಗಳು,
3A to 2Cಗೆ ವಕ್ಕಲಿಗರು,
2A& 2B ಜಾತಿಗಳು ಹಾಗೇ ಉಳಿದಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಮೇರೆಗೆ ಕ್ಯಾಬಿನೆಟ್ ನಿರ್ಧಾರ. ಆಯೋಗ ವರದಿಯಲ್ಲಿ ಹೇಳಲಾದ ಎಲ್ಲ ಸೌಲಭ್ಯಗಳು ನೀಡಲಾಗುವುದು.

ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *