ಬೆಳಗಾವಿ – ಸಂಕೇಶ್ವರ ಹತ್ತಿರದ ಟೋಲ್ ಬಳಿ ಬಸ್ಸಿಗೆ ಬೆಂಕಿ ತಗಲಿ ಬಸ್ಸು ಬೆಂಕಿಗಾಹುತಿಯಾದರೂ ಸಹ ಚಾಲಕ ಮತ್ತು ನಿರ್ವಾಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.
ಇಂದು ಸಮಾರು ನಾಲ್ಕು ಗಂಟೆಗೆ ಸಾತಾರಾದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ಸಿಗೆ ಹತ್ತರಕಿ ಟೋಲ್ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ,ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ಸು ನಿಲ್ಲಿಸಿ, ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾನೆ.
ಬಸ್ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಪ್ರಯಾಣಿಕರನ್ನು ತ್ವರಿತಗತಿಯಲ್ಲಿ ಬಸ್ಸಿನಿಂದ ಕೆಳಗೆ ಇಳಿಸಿದ್ದರಿಂದ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ,
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದು ಬಸ್ಸು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.ಸಂಕೇಶ್ವರ ಪೋಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
