ಬೆಳಗಾವಿ: ನಗರದ ರಾಮತೀರ್ಥ ನಗರದಲ್ಲಿ ಮಾಜಿ ಸೈನಿಕರ ಕಲ್ಯಾಣ ಸಂಘ ಸ್ಥಾಪನೆಗೊಂಡಿದ್ದು ಸಂಘದ ಉದ್ಘಾಟನಾ ಕಾರ್ಯಕ್ರಮ ಇಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಕಣಬರಗಿ ರಸ್ತೆಯ ಸಂಕಲ್ಪ ಗಾರ್ಡನ್‌ನಲ್ಲಿ ಉದ್ಘಾಟನೆ ಸಮಾರಂಭ ನೆರವೇರಲಿದ್ದು ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ. ಮಾಜಿ ಸೈನಿಕರ ಕಲ್ಯಾಣ ಸಂಘದ ಉದ್ಘಾಟನೆಯನ್ನು ನಿವೃತ್ತ ಮೇಜರ್ ಜನರಲ್ ಕೆ.ಎನ್.ಮಿರ್ಜಿ ನೆರವೇರಿಸಲಿದ್ದು ಕಾರ್ಯಕ್ರಮ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದೆ ಮಂಗಲ ಅಂಗಡಿ, ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಬುಡಾ ಆಯುಕ್ತ ಪ್ರೀತಮ ನಸಲಾಪುರೆ, ಮಹಾನಗರ ಪಾಲಿಕೆ ಸದಸ್ಯ ಪ್ರೀತಮ ನಸಲಾಪುರೆ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸುವಂತೆ ಮಾಜಿ ಸೈನಿಕರ ಕಲ್ಯಾಣ ಸಂಘದ ಅಧ್ಯಕ್ಷ ರಾಜೇಂದ್ರ ಎನ್. ಹಲಗಿ, ಉಪಾಧ್ಯಕ್ಷ ಬಸವರಾಜ ಬಿ.ವಣ್ಣೂರ, ಕಾರ್ಯದರ್ಶಿ ಬಾಬು ಯ ಜಮನಾಳ ಕೋರಿದ್ದಾರೆ.
