ಬೆಳಗಾವಿ-ಶಾಸಕ ಅನಿಲ ಬೆನಕೆ ಅವರ ವಿಶೇಷ ಪ್ರಯತ್ನದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಳಗಾವಿಯಲ್ಲಿ ಮತ್ತೊಂದು ವಿಶೇಷ ಆಸ್ಪತ್ರೆ ನಿರ್ಮಿಸಲು 27 ಕೋಟಿ ರೂ ಅನುದಾನವನ್ನು ಮಂಜೂರು ಮಾಡಿವೆ.
ಬೆಳಗಾವಿ ನಗರದಲ್ಲಿ ಅಭಿವೃದ್ಧಿ
ಪರ್ವವನ್ನು ಮುಂದು ವರೆಸಿರುವ ಶಾಸಕ ಅನಿಲ ಬೆನಕೆ ಅವರು 27 ಕೋಟಿ ವಿಷೇಶವಾದ ಅನುದಾನ ಬಿಡುಗಡೆ ಮಾಡಿಸಿ ಮತ್ತೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಲಿದ್ದಾರೆ. ಕರ್ನಾಟಕ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಬೆಳಗಾವಿಯಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ 27 ಕೋಟಿ ಬಿಡುಗಡೆ ಆಗಿದೆ.
ಬೆಳಗಾವಿಯಲ್ಲಿ ಜಿಲ್ಲಾಸ್ಪತ್ರೆ ಅಭಿವೃದ್ಧಿ, ಮಲ್ಟಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ವಿಷೇಶ ಒತ್ತು ನೀಡಿರುವ ಶಾಸಕ ಅನಿಲ ಬೆನಕೆ ಅವರು, ಬೆಳಗಾವಿಯಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ಸೇರಿದಂತೆ ರಾಜ್ಯ ಸಚಿವರಿಗೆ ಮನವಿ ಸಲ್ಲಿಸಿದರು. ಅದರ ಫಲವಾಗಿ ಕೇಂದ್ರದಿಂದ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಆಗಿದೆ.
ಅನುದಾನ ಬಿಡುಗಡೆ ಆಗಿದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರ ಸಹಕಾರಕ್ಕೆ ಶಾಸಕ ಅನಿಲ ಬೆನಕೆ ಅವರು ಧನ್ಯವಾದ ತಿಳಿಸಿದ್ದಾರೆ.