Breaking News

ಬೆಳಗಾವಿ, ಕನ್ನಡ ಹೋರಾಟಗಾರರ ವಿರುದ್ಧ ರೌಡಿಶೀಟ್ ಓಪನ್…!!

ಬೆಳಗಾವಿ-ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.ಬೆಳಗಾವಿ ಪಾಲಿಕೆಯಲ್ಲಿ ಮರಾಠಿ ಭಾಷಿಕರಿಗೆ ಮೇಯರ್ ಉಪ ಮೇಯರ್ ಎರಡೂ ಸ್ಥಾನಗಳನ್ನು ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲಿಯೇ ಈಗ ರಾಜ್ಯಸರ್ಕಾರ ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟ್ ಓಪನ್ ಮಾಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡಿಗರ ಆಕ್ರೋಶಕ್ಕೆ ಕಾರಣವಾದ ಬೆಳಗಾವಿ ಪೊಲೀಸರುಕನ್ನಡಪರ ಹೋರಾಟಗಾರರ ವಿರುದ್ಧ ರೌಡಿಶೀಟ್ ಓಪನ್ ಮಾಡಿದ್ದಾರೆ.ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದವರ ವಿರುದ್ಧ ರೌಡಿಶೀಟ್ ಓಪನ್ ಮಾಡಲಾಗಿದೆ.ಸಂಪತ್‌ಕುಮಾರ್ ದೇಸಾಯಿ, ಅನಿಲ್ ದಡ್ಡಿಮನಿ ವಿರುದ್ಧ ರೌಡಿಶೀಟ್ ಓಪನ್ ಆಗಿದೆ.ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಜಾರಿ ಮಾಡಿದ್ದ ಕಾರಣ ಕೇಳಿ ನೋಟಿಸ್ ನೋಡಿ ಕನ್ನಡಪರ ಹೋರಾಟಗಾರರಿಗೆ ಶಾಕ್ ನೀಡಿರುವ ಬೆಳಗಾವಿ ಪೋಲೀಸರು,ಟಿಳಕವಾಡಿ ಠಾಣೆಯಿಂದ ಅನಿಲ್ ದಡ್ಡಿಮನಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ.ಎಪಿಎಂಸಿ ಠಾಣೆಯಿಂದ ಸಂಪತ್‌ಕುಮಾರ್ ದೇಸಾಯಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ.
ಚುನಾವಣೆ ಕಾಲದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಮುಚ್ಚಳಿಕೆ ನೀಡುವಂತೆ ನೋಟಿಸ್ ಜಾರಿಯಾಗಿದೆ.50 ಸಾವಿರ ರೂ. ಮೊತ್ತದ ಸ್ವಯಂ ಮುಚ್ಚಳಿಕೆ ಹಾಗೂ ಇಷ್ಟೇ ಮೊತ್ತದ ಇಬ್ಬರು ಜಾಮೀನುದಾರರಿಂದ ಮುಚ್ಚಳಿಕೆ ಪಡೆಯುವಂತೆ ನೋಟಿಸ್ ಇದಾಗಿದೆ.

ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದ ಇಬ್ಬರು ಯುವಕರು,2021ರ ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್‌ಗೆ ನುಗ್ಗಿ ಎಂಇಎಸ್ ಮುಖಂಡ ದೀಪಕ್ ದಳವಿಗೆ ಮಸಿ ಬಳಿದಿದ್ದ ಇಬ್ಬರು ಕನ್ನಡ ಹೋರಾಟಗಾರರಿಗೆ ಈಗ ಪೋಲೀಸರು ನೋಟೀಸ್ ನೀಡುವ ಮೂಲಕ ಶಾಕ್ ನೀಡಿದ್ದಾರೆ.ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದ ಹಿನ್ನೆಲೆ ಜೈಲು ಸೇರಿ ಬಿಡುಗಡೆಯಾಗಿದ್ದ ಇಬ್ಬರು ಕನ್ನಡ ಹೋರಾಟಗಾರರು ಪೋಲೀಸರ ದೃಷ್ಠಿಯಲ್ಲಿ ರೌಡಿಗಳಾಗಿದ್ದಾರೆ.

ಬೆಳಗಾವಿ ಕನ್ನಡಪರ ಹೋರಾಟಗಾರರ ಮೇಲೆ ರೌಡಿಶೀಟ್ ವಿಚಾರವಾಗಿ,ರಾಜ್ಯ ಸರ್ಕಾರ, ಪೊಲೀಸರ ವಿರುದ್ಧ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ.ಕನ್ನಡಪರ ಹೋರಾಟಗಾರ ಸಂಪತ್‌ಕುಮಾರ್ ದೇಸಾಯಿ, ಅನಿಲ್‌ ದಡ್ಡಿ ಮೇಲಿನ ರೌಡಿಶೀಟ್ ಕೈಬಿಡಲು ಆಗ್ರಹ ಪಡಿಸಲಾಗುತ್ತಿದೆ.
ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಅಭಿಯಾನ ಶುರುವಾಗಿದೆ.

ಹ್ಯಾಷ್‌ಟ್ಯಾಗ್‌ #ನಾಡವಿರೋಧಿ ಸರ್ಕಾರ ಎಂಬ ಹೆಸರಿನಲ್ಲಿ ಅಭಿಯಾನ ಶುರುವಾಗಿದ್ದು,ನಮ್ಮ ಸರ್ಕಾರ ನಮ್ದಲ್ಲ.. ಬೆಳಗಾವಿ ನಮ್ದಲ್ಲ.. ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗುತ್ತಿದೆ.ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಕನ್ನಡಿಗರು ರಾಜ್ಯ ಸರ್ಕಾರ ಕನ್ನಡಿಗರ ವಿರೋಧಿ ಸರ್ಕಾರ ಎಂದು ಆರೋಪಿಸಿದ್ದಾರೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *