ಬೆಳಗಾವಿ,: ಕೋವಿಡ್-೧೯ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಕಸಾಯಿಗಲ್ಲಿಯ ೨೬ ವರ್ಷದ ವ್ಯಕ್ತಿ(ಪಿ-೧೨೭)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಇವರು ಮಾ.೩೧ ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೫೪ ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ ಪೈಕಿ ಆರು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇದೀಗ ಒಟ್ಟಾರೆ ಏಳು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ