ಬೆಳಗಾವಿ-ಐತಿಹಾಸಿಕ ರಾಜಹಂಸಗಡ ಕೋಟೆ ಅಭಿವೃದ್ಧಿ ವಿಚಾರದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ.2023ರ ವಿಧಾನಸಭೆ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ – ಬಿಜೆಪಿ ಕಿತ್ತಾಟ,ನಡೆದಿದ್ದು,ಇಂದು ಬಿಜೆಪಿ ಪಡೆ,ರಮೇಶ್ ಜಾರಕಿಹೊಳಿ ನೇತ್ರತ್ವದಲ್ಲಿ ರಾಜಹಂಸಗಡಕ್ಕೆ ಭೇಟಿ ನೀಡಲಿದೆ.
ಬೆಳಗಾವಿ ಪಕ್ಕದಲ್ಲೇ ಇರುವ ರಾಜಹಂಸಗಡ ಕೋಟೆ ಅಭಿವೃದ್ಧಿ ಮಾಡುವ ಯೋಜನೆ ರೂಪಿಸಿದ್ದು ಮಾಜಿ ಶಾಸಕ ಸಂಜಯ ಪಾಟೀಲ,ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಯಾದಬಳಿಕ,ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಮುಂದಾಗಿ ಅವರೇ ಒಂದು ಯೋಜನೆ ರೂಪಿಸಿ,ಬಿಜೆಪಿ ಸರ್ಕಾರ ಇದ್ದರೂ ಸಹ ಕಾಡು ಬೇಡಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿಸಿ ರಾಜಹಂಸಗಡ ಕೋಟೆಯನ್ನು ಅಭಿವೃದ್ಧಿಪಡಿಸಿ ಕೋಟೆಯ ಆವರಣದಲ್ಲಿ ಕರ್ನಾಟಕದಲ್ಲೇ ಅತೀ ಎತ್ತರವಾದ ಛತ್ರಪತಿ ಶಿವಾಜಿ ಮಹಾರಾಜರ ಸಿಂಹಾಸನರೂಢ ಮೂರ್ತಿಯನ್ನು ಸಿದ್ಧಪಡಿಸಿದ್ದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಈ ವಿಚಾರದಲ್ಲಿ ಎರಡು ಮಾತಿಲ್ಲ.
3ಕೋಟಿ ರೂ.ವೆಚ್ಚದಲ್ಲಿ ಬೃಹತ್ ಶಿವಾಜಿ ಮೂರ್ತಿ, ದೇವಸ್ಥಾನ, ಕೋಟೆ ಅಭಿವೃದ್ಧಿ,ಮಾಡಲಾಗಿದೆ.
ಕನ್ನಡ ಮತ್ತು ಸಂಸ್ಕತಿ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ,ಮಾರ್ಚ 5ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಕಾಂಗ್ರೆಸ್ ನಾಯಕರಿಂದ ಉದ್ಘಾಟನೆಗೆ ಸಿದ್ಧತೆ ಮಾಡಿಕೊಂಡಿದ್ದರು.
ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಲೋಕಾರ್ಪಣೆಗೆ ಭರದ ಸಿದ್ಧತೆಯೂ ನಡೆದಿತ್ತು,
ಕಾಂಗ್ರೆಸ್ ನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಂದ ತೀವ್ರ ವಿರೋಧ
*ಬಿಜೆಪಿ ಸರ್ಕಾರ ಅಭಿವೃದ್ಧಿ ಗೆ ಅನುದಾನ ನೀಡಿದೆ ಸರ್ಕಾರದಿಂದಲೇ ಕಾರ್ಯಕ್ರಮ ನಡೆಯಬೇಕು,
ಬಿಜೆಪಿ ಸರ್ಕಾರದಿಂದ ರಾಜಹಂಸಗಡ ಅಭಿವೃದ್ಧಿ 3ಕೋಟಿ ರೂ ಹಣ ನೀಡಲಾಗಿದೆ.ಪ್ರೋಟೋಕಾಲ್ ಪ್ರಕಾರ ಸಿಎಂ
ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂದರಿದ್ದಾರೆ ಅವರಿಗೆ ಆಹ್ವಾನ ನೀಡಬೇಕು.ಸರ್ಕಾರದಿಂದಲೇ ಕಾರ್ಯಕ್ರಮ ನಡೆಯಬೇಕು, ಇಲ್ಲದಿದ್ದರೆ ನಾವು ಪ್ರತಿಭಟನೆ ನಡೆಸುತ್ತೇವೆ.ಎಂದುಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗುಡುಗಿದ ಮಾಜಿ ಸಚಿವ ರಮೇಶ್ ಜಾರಕಿಹೋಳಿ
ಇಂದು ರಾಜಹಂಸಗಡಕ್ಕೆ ತಮ್ಮ ಬೆಂಬಲಿಗರೊಂದಿಗೆ ಭೇಟಿ ಮಾಡುತ್ತಿದ್ದಾರೆ. ಮಾಜಿ ಶಾಸಕ ಸಂಜಯ ಪಾಟೀಲ ಅವರೂ ರಮೇಶ್ ಜಾರಕಿಹೊಳಿ ಅವರಿಗೆ ಸಾಥ್ ಕೊಡುತ್ತಿದ್ದಾರೆ.
ಅಭಿವೃದ್ಧಿಯ ಕ್ರೆಡಿಟ್ ಯಾರಿಗೆ ?
ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ,ಅದರ ಅಭಿವೃದ್ಧಿ ಮಾಡಿಸಿದ್ದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ,ಈ ಕೋಟೆಯ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದು ಬಿಜೆಪಿ ಸರ್ಕಾರ, ಈಗ ಕ್ರೆಡಿಟ್ ಯಾರಿಗೆ ? ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.ಬೆಳಗಾವಿ ಗ್ರಾಮೀಣ ಕ್ಷೇತ್ರದ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಯಾರಿಗೆ ಸೈ ಅಂತಾರೇ,ಯಾರಿಗೆ ಜೈ ಅಂತಾರೆ ಅನ್ನೋದನ್ನು ಕಾಯ್ದು ನೋಡಬೇಕಾಗಿದೆ.
ರಾಜಹಂಸಗಡ ಕೋಟೆಯ ಇತಿಹಾಸ
ಬೆಳಗಾವಿ ಪಕ್ಕದಲ್ಲೇ ಇರುವ ಐತಿಹಾಸಿಕ ರಾಜಹಂಸಗಡ ಕೋಟೆಯನ್ನು ನಿರ್ಮಿಸಿದವರು ರಟ್ಟರು,ನಂತರ ಈ ಕೋಟೆಯಲ್ಲಿ,ಪೇಶ್ವೆ,ಮರಾಠಾ,ಹಾಗು ಹೊಯ್ಸಳರು ಆಳ್ವಿಕೆ ಮಾಡಿದ್ದು ಇತಿಹಾಸ,ಈಗ ಈ ಕೋಟೆಯ ವಶೀಕರಣಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕಿತ್ತಾಟ ನಡೆದಿರುವುದು ಇವತ್ತಿನ ಇತಿಹಾಸ.