Home / Breaking News / ಬೆಳಗಾವಿ ದಕ್ಷಿಣದಲ್ಲಿ ಕಾಂಗ್ರೆಸ್ಸಿಗೆ ಹೊಸ ಶಕ್ತಿ ತುಂಬಿದ ಪ್ರಭಾವತಿ!!

ಬೆಳಗಾವಿ ದಕ್ಷಿಣದಲ್ಲಿ ಕಾಂಗ್ರೆಸ್ಸಿಗೆ ಹೊಸ ಶಕ್ತಿ ತುಂಬಿದ ಪ್ರಭಾವತಿ!!

ಬೆಳಗಾವಿ-ದಶಕಗಳಿಂದ, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕ,ಓಬಿಸಿ ಘಟಕ ಸೇರಿದಂತೆ,ಪಕ್ಷದಲ್ಲಿ ಸಂಘಟನಾತ್ಮಕವಾಗಿ ಅತ್ಯಂತ ಕ್ರಿಯಾಶೀಲವಾಗಿರುವ ಪ್ರಭಾವತಿ ಚಾವಡಿ,ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಈಗ ಸಕ್ರೀಯವಾಗಿದ್ದಾರೆ‌.

ಡಿ‌.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ರಾಮಯ್ಯ, ಸತೀಶ್ ಜಾರಕಿಹೊಳಿ ಅವರ ಆಶಿರ್ವಾದ ಪಡೆದು,ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಧುಮುಕಿರುವ ಪ್ರಭಾವತಿ ಚಾವಡಿ,ಅವರು ಕಾಲಿಗೆ ಚಕ್ರ ಕಟ್ಟಿಕೊಂಡು,ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿ,ಅಲ್ಪಾವಧಿಯಲ್ಲಿ ಕ್ಷೇತ್ರದಲ್ಲಿ ಅಮೋಘವಾದ ಸಂಪರ್ಕ ಸಾಧಿಸಿದ್ದಾರೆ.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಈಗಾಗಲೇ ದಕ್ಷಿಣ ಮತಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿ ಯಶಸ್ವಿಯಾಗಿರುವ ಅವರು ಹೋಳಿ ಹಬ್ಬದ ದಿನ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ವುಮೇನಿಯಾ ಹೋಳಿ ಕಾರ್ಯಕ್ರಮ ಆಯೀಜಿಸಲು ಭರದ ಸಿದ್ಧತೆ ನಡೆಸಿರುವ ಪ್ರಭಾವತಿ ಚಾವಡಿ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಹೊಸ ಹುರುಪು ಮೂಡಿಸಿ,ಪಕ್ಷಕ್ಕೆ ಶಕ್ತಿ ತುಂಬುವ ಕಾಯಕದಲ್ಲಿ ಮಗ್ನರಾಗಿದ್ದಾರೆ.

ಪಕ್ಷದ ಸಂಘಟನೆ,ಪಕ್ಷದ ಆದೇಶ,ಪಕ್ಷದ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸುತ್ತ ಬಂದಿರುವ ಪ್ರಭಾವತಿ ಚಾವಡಿ ಅವರಿಗೆ ಕ್ಷೇತ್ರದಲ್ಲಿ ಅಪಾರ ಜನಬೆಂಬಲ ಸಿಗುತ್ತಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *