ಪ್ಲಾಸ್ಟೀಕ್ ಚೀಲ, ನೀರಿನ ಬಾಟಲ್, ಎಲೆಕ್ಟ್ರಾನಿಕ್ ವಸ್ತು ತರಲು ನಿರ್ಬಂಧ!

ಬೆಳಗಾವಿ, ಫೆ.25(ಕರ್ನಾಟಕ ವಾರ್ತೆ): ನಗರದಲ್ಲಿ ಇದೇ ಫೆ.27 ರಂದು ನಡೆಯಲಿರುವ ಮಾನ್ಯ ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಕೈಚೀಲಗಳು(ಬ್ಯಾಗ್), ನೀರಿನ ಬಾಟಲ್ ಹಾಗೂ ಯಾವುದೇ ತರಹದ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಗಳನ್ನು ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ.
ಬಸ್ ಮತ್ತಿತರ ವಾಹನಗಳಲ್ಲಿ ಆಗಮಿಸುವ ಫಲಾನುಭವಿಗಳು ಹಾಗೂ ಸಾರ್ವಜನಿಕರು ತಮ್ಮ ಬ್ಯಾಗ್ ಗಳು, ನೀರಿನ ಬಾಟಲ್ ಮತ್ತು ಮೊಬೈಲ್ ಹೊರತುಪಡಿಸಿ ಯಾವುದೇ ತರಹದ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಗಳನ್ನು ಬಸ್ ಅಥವಾ ತಮ್ಮ ವಾಹನಗಳಲ್ಲಿಯೇ ಇಟ್ಟು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಬಹುದು.
ಮೊಬೈಲ್ ಫೋನ್ ಗಳನ್ನು ತರಲು ಅವಕಾಶವಿರುತ್ತದೆ. ಭದ್ರತೆ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
***

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *