ಬೆಳಗಾವಿ-ಬೆಳಗಾವಿಯಿಂದಲೇ ಚುನಾವಣಾ ರಣಕಹಳೆ ಮೊಳಗಿಸಲು ಕಾಂಗ್ರೆಸ್ ನಿರ್ಧರಿಸಿದೆ. ಮಾರ್ಚ್ 20 ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಿಸಲು ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಮಾರ್ಚ್ 20ರಂದು ಬೆಳಗಾವಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಯುವ ಕ್ರಾಂತಿ’ ರ‌್ಯಾಲಿಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪರ್ವ ಶುರುವಾಗಲಿದೆ.ಕಿತ್ತೂರು ಕರ್ನಾಟಕದ ಕೇಂದ್ರ ಸ್ಥಾನ ಬೆಳಗಾವಿಯಿಂದಲೇ ರಾಹುಲ್ ಗಾಂಧಿ ಪ್ರಚಾರ ಶುರುವಾಗುತ್ತಿರುವುದು ವಿಶೇಷವಾಗಿದೆ.
ಬೆಳಗಾವಿಯಲ್ಲಿ ನಡೆಯಲಿರುವ. ಕಾಂಗ್ರೆಸ್ ‘ಯುವ ಕ್ರಾಂತಿ’ ರ‌್ಯಾಲಿ ಯಶಸ್ವಿಗೆ ರಾಜ್ಯ ಕಾಂಗ್ರೆಸ್ ನಾಯಕರ ಕಸರತ್ತು ನಡೆಸಿದ್ದಾರೆ.ಭಾರತ ಜೋಡೋ ಯಾತ್ರೆ ಬಳಿಕ ಮೊದಲ ಸಾರ್ವಜನಿಕ ಸಭೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು,ಮೂರರಿಂದ ನಾಲ್ಕು ಲಕ್ಷ ಜನರ ಸೇರಿಸಿ ಶಕ್ತಿಪ್ರದರ್ಶನ ನಡೆಸಲು ಸಿದ್ಧತೆ ನಡೆಯುತ್ತಿದೆ.
ಕಿತ್ತೂರು ಕರ್ನಾಟಕ ಭಾಗದ ಹತ್ತು ಸಂಘಟನಾತ್ಮಕ ಜಿಲ್ಲೆಗಳ ನಾಯಕರಿಗೆ ಜನ ಸೇರಿಸುವ ಟಾಸ್ಕ್ ಕೊಡಲಾಗಿದೆ.ಯುವಕ್ರಾಂತಿ ರ‌್ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರ ಕರೆ ತರುವಂತೆ ಟಾಸ್ಕ್ ಕೊಟ್ಟಿದ್ದಾರೆ.ಹಾಲಿ, ಮಾಜಿ ಶಾಸಕರು, ಸಂಸದರು, 2023ರ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಗೆ ಟಾಸ್ಕ್ ಕೊಡುವ ಮೂಲಕ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳನ್ನು ಬಳಿಸಿಕೊಳ್ಳಲು ನಿನ್ನೆ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.
ಕ್ಷೇತ್ರವಾರು ನಾಯಕರ ಜೊತೆ ಪ್ರತ್ಯೇಕ ಸಭೆ ಮಾಡಿ ಚರ್ಚಿಸಿದ ನಾಯಕರು,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟಿಕೆಟ್ ಆಕಾಂಕ್ಷಿಗಳ ಜೊತೆ ಚರ್ಚೆ ಮಾಡಿದ್ದಾರೆ.ರಾಹುಲ್ ಗಾಂಧಿ ಸಮಾವೇಶ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಮಾಡುವದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.