Breaking News

ಹೊಂಡದಲ್ಲಿ ಈಜಲು ಹೋದ ಇಬ್ಬರು ಮಕ್ಕಳು ಸಾವು

ಬೆಳಗಾವಿ : ಈಜಲು ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಇಳಿದ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಇಂದು ನಡೆದಿದೆ.

ಯಾದಗೂಡು ಗ್ರಾಮದ ಯಮನಪ್ಪ ಪ್ರಕಾಶ ರೆಡ್ಡರಟ್ಟಿ (10) ಹಾಗೂ ಯೇಸು s/o ಬಸಪ್ಪ 14 ವರ್ಷ ಈ ಇಬ್ಬರು ನೀರಲ್ಲಿ ಮುಳಗಿ ಮೃತಪಟ್ಟಿರುವ ದುರ್ಧೈವಿಗಳಾಗಿದ್ದಾರೆ.

ರವಿವಾರ ಸಂಜೆ 4.50 ರ ವೇಳೆಯಲ್ಲಿ ಈ ದಾರುಣ ಘಟನೆ ನಡೆದಿದ್ದು, ಈ ಇಬ್ಬರೂ ಮಕ್ಕಳು ಕ್ರಿಕೆಟ್ ಆಡುತ್ತಾ ತೋಟದ ಬಳಿ ಇರುವ ಕೃಷಿ ಹೊಂಡದಲ್ಲಿ ಈಜಲು ಬಂದರು. ಯಮನಪ್ಪ ನೀರಿನಲ್ಲಿ ಮುಳುಗುತ್ತಿದ್ದನು, ಆ ಸಮಯದಲ್ಲಿ ಯೇಸು ಅವನನ್ನು ರಕ್ಷಿಸಲು ಪ್ರಯತ್ನಿಸಿದನು ಆದರೆ ಯಶಸ್ವಿಯಾಗಲಿಲ್ಲ.

ಮುಳುಗುತ್ತಿದ್ದ ಯಮನಪ್ಪನನ್ನು ರಕ್ಷಿಸಲು ಹೋದ ಇನ್ನೊಬ್ಬ ಬಾಲಕ ಯೇಶು ಸಹ ಅಸುನೀಗಿದ್ದಾನೆ. ಘಟನಾ ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಎಸ್ ಎಂ ಕೃಷ್ಣ ನಿಧನ, ನಾಳೆ ಸರ್ಕಾರಿ ರಜೆ ಘೋಷಣೆ,

ಎಸ್​ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ ಘೋಷಣೆ, ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಕ್ರಿಯೆ …

Leave a Reply

Your email address will not be published. Required fields are marked *