Breaking News

ಮೇ.10 ಫೈಟಿಂಗ್..ಮೇ13 ರಂದು ಕೌಂಟಿಂಗ್,ನಂತರ ಸರಕಾರ ರಚಿಸಲು ಡೇಟೀಂಗ್!!

 

ಎಪ್ರೀಲ್ 13 ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ

ಎಪ್ರೀಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ

ಎಪ್ರಿಲ್ 21 ನಾಮಪತ್ರಗಳ ಪರಶೀಲನೆ

ಎಪ್ರೀಲ್ 24 ನಾಮಪತ್ರ ಹಿಂಪಡೆಯಲು ಕೊನೇಯ ದಿನಾಂಕ

ಮೇ 10 ರಂದು ಮತದಾನ

ಮೇ 13 ರಂದು ಮತ ಎಣಿಕೆ

ದೆಹಲಿ

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಏ.13 ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ, ಏ‌.20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ಏ.21 ರಂದು ನಾಮಪತ್ರಗಳ ಪರಿಶೀಲನೆ, ಏ‌.24 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ ಎಂದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ಮತ್ತು ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈಶಾನ್ಯದ ಮೂರು ರಾಜ್ಯಗಳ ಚುನಾವಣೆ ಯಶಸ್ವಿಯಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ನಮ್ಮ ಪ್ರಯತ್ನ ಇದೆ. ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನು ಕರ್ನಾಟಕದಲ್ಲಿ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ.

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ ಮಾಹಿತಿ ನೀಡಿದರು. ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ.

ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ದಿನಾಂಕಗಳನ್ನು ಪ್ರಕಟಿಸಿದೆ. ಚುನಾವಣಾ ದಿನಾಂಕಗಳ ಘೋಷಣೆಯೊಂದಿಗೇ ʼಮಾದರಿ ನೀತಿ ಸಂಹಿತೆʼ ಜಾರಿಗೆ ಬಂದಿದೆ. ರಾಜಕೀಯ ನಾಯಕರು, ಪಕ್ಷಗಳು, ಅಧಿಕಾರಿಗಳು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ನೀತಿಸಂಹಿತೆಗೆ ಬದ್ಧರಾಗಿರಬೇಕಾಗುತ್ತದೆ.ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಆಯೋಗ ಕ್ರಮ ಕೈಗೊಳ್ಳಲಿದೆ. ಬೆಂಗಳೂರಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಇದನ್ನು ತಡೆಯಲು ಪರಿಹಾರ ಕಂಡುಕೊಳ್ಳಲು ಎಲೆಕ್ಟ್‌ಥಾನ್ ಕೈಗೊಳ್ಳಲು ಮುಂದಾಗಿದ್ದೇವೆ ಎಂದು ತಿಳಿಸಿದರು.

Check Also

ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!

ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ …

Leave a Reply

Your email address will not be published. Required fields are marked *