ಬೆಳಗಾವಿ- ಬೆಳಗಾವಿ ನಗರದ ಉತ್ತರ ಮತ್ತು ದಕ್ಷಿಣ ಮತ ಕ್ಷೇತ್ರದಲ್ಲಿ ಲಿಂಗಾಯತ ಸಮಾಜದ ಆಕಾಂಕ್ಷಿಗೆ ಟಿಕೆಟ್ ನೀಡಿದ ಪಕ್ಷಕ್ಕೆ ಬಹಿರಂಗ ಬೆಂಬಲ ನೀಡುವದಾಗಿ ಬೆಳಗಾವಿಯ ನಾಗನೂರು ಮಠದಲ್ಲಿ ಸೇರಿದ ವಿವಿಧ ಲಿಂಗಾಯತ ಸಂಘಟನೆಗಳ ನಾಯಕರು ಶ್ರೀಗಳ ಸಮ್ಮುಖದಲ್ಲಿ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.
ಬೆಳಗಾವಿ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದರೆ ಪಕ್ಷಾತೀತವಾಗಿ ಲಿಂಗಾಯತ ಸಂಃಘಟನೆಗಳು ಬೆಂಬಲ ನೀಡುತ್ತವೆ ಎನ್ನುವ ನಿರ್ಧಾರವನ್ನು ಸೋಮವಾರ ನಾಗನೂರು ಮಠದಲ್ಲಿ ನಡೆದ ವಿವಿಧ ಲಿಂಗಾಯತ ಸಂಘಟನೆಯ ಮುಖಂಡರ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.
ದಶಕಗಳಿಂದಲೂ ಬೆಳಗಾವಿ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರದಲ್ಲಿ ಲಿಂಗಾಯತರು ನಿರ್ಣಾಯಕ ಮತದಾರರಾಗಿದ್ದಾರೆ. ಆದರೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಹಾಗೂ ಬಿಜೆಪಿ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ಆದರೂ ಲಿಂಗಾಯತ ಮತದಾರರು ಈ ಕ್ಷೇತ್ರದಲ್ಲಿ ಹಾಕುವ ಅಭ್ಯರ್ಥಿಗಳನ್ನು ಬೆಂಬಲಿಸುತ್ತಾ ಬಂದಿದ್ದೇವೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದ್ದು ಎನ್ನುವ ನಿರ್ಣಯವನ್ನು ವಿವಿಧ ಲಿಂಗಾಯತ ಸಂಘಟನೆಗಳು ಒಮ್ಮತ್ತದ ನಿರ್ಣಯ ತೆಗೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ್ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಮಾತನಾಡಿ, ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಮತಕ್ಷೇತ್ರದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಪಕ್ಷಾತೀತವಾಗಿ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯದ ನಾಯಕರಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.
ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಮಾತನಾಡಿ, ಬೆಳಗಾವಿ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರದಲ್ಲಿ ಲಿಂಗಾಯತ ಸಮಯದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್ ಲಿಂಗಾಯತರಿಗೆ ನೀಡಬೇಕು. ಇಲ್ಲದಿದ್ದರೆ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸುಜೀತ ಮುಳಗುಂದ ಸೇರಿದಂತೆ ಹಲವಾರು ಇನ್ನಿತರರು ಉಪಸ್ಥಿತರಿದ್ದರು.