Breaking News

ಬೆಳಗಾವಿ: ಲಕ್ಷರಿ ಬಸ್ ನಲ್ಲಿ ಕೋಟಿ,ಕೋಟಿ ಹಣ ಪತ್ತೆ!!

ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ

ಬೆಳಗಾವಿ, ಏ.5(ಕರ್ನಾಟಕ ವಾರ್ತೆ): ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಮುಂಬೈಯಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ.

ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ‌ ಮಾಹಿತಿಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಅವರು ಭೇಟಿ ಪ್ರಕರಣವನ್ನು ಪರಿಶೀಲಿಸಿದರು.
ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿರುತ್ತದೆ.
ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಶ್ಲಾಘಿಸಿದ್ದಾರೆ.
***

Today morning at 3.30 am canara Pinto bus KA 70 1459

checked at Hirebagewadi toll plaza .

Without any documents

2 Crores seized

Hirebagewadi CPI Shri Amaresh and Election FST team head Shri Shambhulingappa and Shri Rajendra Morabad , Shri Gopalkrishna Goudar ACP rural, Rajshekhar Dambal Returning officer Belagavi Rural,Shneha DCP crime and traffic were present during the seizure. A case is being lodged under KP Act under section 98. IT officials have been informed for further necessary action.

Check Also

ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?

  ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.