ಬೆಳಗಾವಿ- ಬೆಳಗಾವಿ ಜಿಲ್ಲೆಯ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಈ ಬಂಡಾಯ ಅಭ್ಯರ್ಥಿಗಳನ್ಬು ಜೆಡಿಎಸ್ ಬುಟ್ಟಿಗೆ ಹಾಕಿಕೊಳ್ಳಲು ಮಂಗಳವಾರ ಮಾಜಿ ಸಿಎಂ ಕುಮಾರಣ್ಣ ಬೆಳಗಾವಿಗೆ ಬರ್ತಿದ್ದಾರೆ.
ನಾಳೆ ಬೆಳಗ್ಗೆ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ,ಚೋಪ್ರಾ ಅವರನ್ನು ಕುಮಾರಸ್ವಾಮಿ ಭೇಟಿಯಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಮನವೊಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕಿತ್ತೂರ ಕ್ಷೇತ್ರದ ಡಿ.ಬಿ ಇನಾಮದಾರ್ ಅವರಿಗೂ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು,ಇನಾಮದಾರ್ ಸೊಸೆ ಲಕ್ಷ್ಮೀ ಇನಾಮದಾರ್,ನಿಪ್ಪಾಣಿಯ ಉತ್ತಮ್ ಪಾಟೀಲ,ಸೇರಿದಂತೆ ಹಲವಾರು ಜನ ಬಂಡಾಯ ಅಭ್ಯರ್ಥಿಗಳನ್ನು ಕುಮಾರಸ್ವಾಮಿ ಭೇಟಿಯಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ