ಬೆಳಗಾವಿ-ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಪರಾಭವಗೊಂಡು ರಾತ್ರಿ ಗಾಢ ನಿದ್ರೆಯಲ್ಲಿರುವಾಗ ಮದ್ಯರಾತ್ರಿ ಅವರನ್ಬು ಎಬ್ಬಿಸಿ ಬೆಂಗಳೂರಿಗೆ ಕರೆಯಿಸಿಕೊಂಡು ಅವರನ್ನು ಡಿಸಿಎಂ ಮಾಡಿದ ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಲು ಇದೇ ಲಕ್ಷ್ಮಣ ಸವದಿ ಅವರು ಇವತ್ತು ಬೆಳ್ಳಂ ಬೆಳಗ್ಗೆ,ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಕಳುಹಿಸಿದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಹಾರಿದ್ರು.
ಬೆಂಗಳೂರಿಗೆ ಹಾರುವ ಮುನ್ನ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಣ ಸವದಿ ತಮ್ಮ ಮನದಾಳದ ಇಂಗಿತವನ್ನು ಹೊರಹಾಕಿದ್ದಾರೆ.
ಬೆಂಗಳೂರಿಗೆ ಹೋಗಿ ಸಾಧಕ, ಬಾಧಕ ಚರ್ಚೆ ಮಾಡ್ತಿನಿ.ಆದಮೇಲೆ ಒಂದು ನಿರ್ಣಯ ಮಾಡ್ತಿನಿ.ವಿಧಾನ ಪರಿಷತ್ ಸ್ಥಾನ ಪಕ್ಷಕ್ಕೆ ರಾಜೀನಾಮೆ ಕೊಡಬೇಕು.ಇನ್ನೂ ಬಿಜೆಪಿಯ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು.
ಬಳಿಕ ಏನ್ ಮಾಡಬೇಕು ಎನ್ನುವ ತೀರ್ಮಾನ ಮಾಡ್ತಿನಿ.ಎಂದು ಹೇಳಿದ ಲಕ್ಷ್ಮಣ ಸವದಿ ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ಸೂಚನೆ ನೀಡಿದ್ರು.
ಕಾಂಗ್ರೆಸ್, ಜೆಡಿಎಸ್ ನಿಂದ ಆಹ್ವಾನ ಇದೆ.ಸಂಜೆಯ ವರಗೆ ತೀರ್ಮಾನಕ್ಕೆ ಬರ್ತಿನಿ.ಏಪ್ರಿಲ್ 17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ.ಕ್ಷೇತ್ರದ ಜನರ ಒಪ್ಪಿಗೆ ಪಡೆದಿದ್ದೇನೆ.ಖಾಸಗಿಯಾಗೂ ಅನೇಕರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ.ಮನೆ ಬಿಟ್ಟು ಹೊರಗೆ ಬಂದ ಮೇಲೆ ಸಂಪರ್ಕ ಮಾಡಿದ್ರೆನು, ಬಿಟ್ಟರೇನು.ನನ್ನ ಸಂಪರ್ಕಕ್ಕೆ ಬಿ ಎಲ್ ಸಂತೋಷ ಬಹಳ ಪ್ರಯತ್ನ ಪಟ್ಟರು.ಕೆಲ ಮುಖಂಡರನ್ನು ಸಹ ಕಳಸಿದ್ರು.ಆಜ್ಞೆಯನ್ನು ಪಾಲಿಸುವುದು ಕಷ್ಟ, ಬಿಡುವುದು ಕಷ್ಟ.ಸಂತೋಷ ನನ್ನ ಗುರು, ನನ್ನನ್ನು ಕ್ಷಮಿಸಿ ಎಂದು ಹೇಳುತ್ತೇನೆ.ಅವರಿಂದ ಯಾವುದೇ ಅನ್ಯಾಯ ಆಗಿಲ್ಲ, ಕಷ್ಟ ಕಾಲದಲ್ಲಿ ನೆರವು ಕೊಟ್ಟಿದ್ದಾರೆ.ಎಂದು ಲಕ್ಷ್ಮಣ ಸವದಿ ಬಿ.ಎಲ್ ಸಂತೋಷ ಅವರ ಋಣವನ್ನು ಸ್ಮರಿಸಿದರು.
ಅಥಣಿ ಕೆಲ ಪ್ರದೇಶ ನೀರಾವರಿಯಿಂದ ವಂಚಿತಗೊಂಡಿದೆ.
ನೀರಾವರಿ ಸೌಲಭ್ಯ ಕಲ್ಪಿಸಬೇಕು ಎನ್ನುವುದು ಆಸೆ.ವೈಯಕ್ತಿಕ ಬೇಡಿಕೆ ಅಲ್ಲ, ನೀರಾವರಿ ಬೇಡಿಕೆ ಇಡುತ್ತೇನೆ,ಎಂದರು.