Breaking News

ನಾಳೆ ಬೆಳಗಾವಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.

ಬೆಳಗಾವಿ-ನಾಳೆ ಗುರುವಾರ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರು ನಾಮಪತ್ರ ಸಲ್ಲಿಸುತ್ತಿದ್ದು, ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ತಮ್ಮ ಮತಕ್ಷೇತ್ರದ ಶಿವಚರಿತ್ರೆ ಹತ್ತಿರದಿಂದ ನಾಮಪತ್ರ ಸಲ್ಲಿಸುವ ಮೆರವಣಿಗೆ ಬೆಳಗ್ಗೆ 10-00 ಗಂಟೆಗೆ ಆರಂಭಿಸಲಿದ್ದಾರೆ.

ಬೆಳಗಾವಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರು ಬೆಳಗಾವಿಯ ಧರ್ಮವೀರ ಸಂಬಾಜಿ ವೃತ್ತದಿಂದ ನಾಮಪತ್ರ ಸಲ್ಲಿಸುವ ಮೆರವಣಿಗೆ ಆರಂಭಿಸಲಿದ್ದಾರೆ.ಬಿಜೆಪಿ ಕಾರ್ಯಕರ್ತರು,ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

Check Also

ಕರ್ನಾಟಕ ರಾಜ್ಯೋತ್ಸವ: ನಾಳೆ ಮಂಗಳವಾರ ಪೂರ್ವಭಾವಿ ಸಭೆ

ಬೆಳಗಾವಿ, -ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನವಂಬರ್ 1, 2024 ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 8) ಜಿಲ್ಲಾ ಪಂಚಾಯತ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.