ನಾಳೆ ಬೆಳಗಾವಿ ಜಿಲ್ಲೆಗೆ ಧಿಡೀರ್ ರಾಹುಲ್ ಗಾಂಧಿ ಬರ್ತಾರೆ..!

ಬೆಳಗಾವಿ :ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿಸಿದ್ದು ಸೋಮವಾರ ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಆಗಮಿಸಲಿದ್ದಾರೆ.

ರಾಮದುರ್ಗದಲ್ಲಿ ಅವರು ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ರಾಹುಲ್ ಗಾಂಧಿ ಇಂದು ಕೂಡಲಸಂಗಮಕ್ಕೆ ಆಗಮಿಸಿದ್ದು ಅಲ್ಲಿಂದ ವಿವಿಧ ಕಾರ್ಯಕ್ರಮ ಮುಗಿಸಿ ಸೋಮವಾರ ಮಧ್ಯಾನ 12ಕ್ಕೆ ರಾಮದುರ್ಗ ಮತ ಕ್ಷೇತ್ರದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವರು.

ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮ ಶಿಷ್ಯ ಅಶೋಕ ಪಟ್ಟಣ ಅವರ ಚುನಾವಣಾ ಪ್ರಚಾರಕ್ಕೆ ನೆರವಾಗಲಿದ್ದಾರೆ.

ಒಟ್ಟಾರೆ, ರಾಹುಲ್ ಗಾಂಧಿ ಆಗಮಿಸುತ್ತಿರುವುದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ಭಾರಿ ನಿರೀಕ್ಷೆಗೆ ಕಾರಣವಾಗಿದೆ. ರಾಹುಲ್ ಗಾಂಧಿ ರಾಮದುರ್ಗಕ್ಕೆ ಆಗಮಿಸುತ್ತಿರುವುದು ಅನಿರೀಕ್ಷಿತ ಬೆಳವಣಿಗೆಯಾಗಿದೆ. ಇದುವರೆಗೆ ಅವರ ಕಾರ್ಯಕ್ರಮ ನಿಗದಿಯಾಗಿರಲಿಲ್ಲ. ಆದರೆ ರವಿವಾರ ಏಕಾಏಕಿ ಅವರ ಕಾರ್ಯಕ್ರಮ ನಿಗದಿಕೊಂಡಿರುವುದು ಕುತೂಹಲ ಕೆರಳಿಸಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *