ಬೆಳಗಾವಿ :
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಈ ಕ್ಷಣಕ್ಕೆ ಸಾಕ್ಷಿಯಾದರು.
ಕೆಲವೇ ಕಾಲ ಉಭಯ ಪಕ್ಷಗಳ ನಾಯಕರು ಕುಶಲೋಪರಿ ವಿಚಾರಿಸಿ ತಮ್ಮ ತಮ್ಮ ಅಭ್ಯರ್ಥಿಗಳ ಪ್ರಚಾರಕ್ಕೆ ತೆರಳಿದರು.
ಬೆಂಗಳೂರಿನಿಂದ ಬಂದ ಮಲ್ಲಿಕಾರ್ಜುನ ಖರ್ಗೆ ಚಿಕ್ಕೋಡಿ, ಬಸವರಾಜ ಬೊಮ್ಮಾಯಿ ಯಮಕನಮರಡಿಗೆ ತೆರಳಿದರೆ ಸಿದ್ದರಾಮಯ್ಯ ಮಾಜಿ ಸಚಿವ ಡಿ.ಬಿ.ಇನಾಮದಾರ ಅವರಿಗೆ ಅಂತಿಮ ನಮನ ಸಲ್ಲಿಸಿ ಬೆಂಗಳೂರಿಗೆ ಹಿಂತಿರುಗಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ