Breaking News

ಅಥಣಿಯಲ್ಲಿ ಸವದಿಗೆ ಬಿಗ್ ಶಾಕ್ : ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ !

ಬೆಳಗಾವಿ–ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಆಕಾಂಕ್ಷಿಗಳನ್ನು ಒಂದು ಮಾತು ಸಹ ಕೇಳದೆ ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲಾಗಿದೆ. ಇದು ನಮ್ಮ ಪಾಲಿಗೆ ಬಹಳ ದೊಡ್ಡ ಅನ್ಯಾಯ. ಇಂತಹ ಅನ್ಯಾಯ ಸಹಿಸಲು ಸಾಧ್ಯವಿಲ್ಲ. ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಬಿಜೆಪಿಯ ತತ್ವ ಸಿದ್ಧಾಂತದಿಂದ ನಾನು ಪ್ರೇರೇಪಿತನಾಗಿದ್ದು ಬರುವ ದಿನಗಳಲ್ಲಿ ಬಿಜೆಪಿಗಾಗಿ ದುಡಿಯುವೆ

; ಧರೆಪ್ಪ ಠಕ್ಕಣ್ಣವರ

ಅಥಣಿ :
ಅಥಣಿಯಲ್ಲಿ ಈ ಬಾರಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾವಿ ಪಂಚಮಸಾಲಿ ಯುವನಾಯಕ
ಧರೆಪ್ಪ ಠಕ್ಕಣ್ಣವರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬುಧವಾರ ಬಿಜೆಪಿ ಸೇರ್ಪಡೆಗೊಂಡರು.

ಧರೆಪ್ಪ ಅವರು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಟ್ಟಾ ಬೆಂಬಲಿಗರೆಂದೇ ಗುರುತಿಸಿಕೊಂಡಿದ್ದರು. ಅಂತ ನಿಷ್ಠಾವಂತ ನಾಯಕನನ್ನು ಸೆಳೆಯುವಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಯಶಸ್ವಿಯಾಗಿರುವುದು ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಾಲಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಸಲವು ಕಮಲ ಅರಳಿಸಲೇಬೇಕು ಎಂಬ ಛಲ ಹೊತ್ತಿರುವ ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ರಣತಂತ್ರದಿಂದ ಇದೀಗ ಕಾಂಗ್ರೆಸ್ ಯುವ ನಾಯಕ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇವರಿಂದಾಗಿ ಪಂಚಮಸಾಲಿ ಸಮುದಾಯದ ಮತಗಳು ಬಿಜೆಪಿ ಅಭ್ಯರ್ಥಿಗೆ ಗಣನೀಯ ಪ್ರಮಾಣದಲ್ಲಿ ಹರಿದು ಬರುವುದರಲ್ಲಿ ಯಾವ ಸಂಶಯ ಇಲ್ಲ. ಅಥಣಿಯಲ್ಲಿ ಈಗಾಗಲೇ ರಮೇಶ ಜಾರಕಿಹೊಳಿ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಬಿಜೆಪಿಗೆ ಸೆಳೆಯುತ್ತಿದ್ದಾರೆ.

39 ವರ್ಷ ವಯಸ್ಸಿನ ಧರೆಪ್ಪ ಅವರು ಅಥಣಿ ಭಾಗದ ಅತ್ಯಂತ ಜನಪ್ರಿಯ ನಾಯಕರು. ತಮ್ಮ ಸಮಾಜ ಸೇವಾ ಕಾರ್ಯದಿಂದ ಅಥಣಿ ತಾಲೂಕಿನ ಎಲ್ಲೆಡೆ ಗುರುತಿಸಿಕೊಂಡಿದ್ದಾರೆ. ಕ್ರಿಯಾಶೀಲ ಹಾಗೂ ಅತ್ಯುತ್ತಮ ಸಂಘಟಕರಾಗಿಯೂ ಹೆಸರು ಮಾಡಿದ್ದಾರೆ.

ಕೊರೊನಾ ಹಾಗೂ ಅಥಣಿ ತಾಲೂಕಿನಲ್ಲಿ ಪ್ರವಾಹ ಬಂದಾಗ ಅವರು ಬಡವರ ಮನೆ ಮನೆಗೆ ತೆರಳಿ ಅಗತ್ಯ ಸಹಾಯ ನೀಡಿ ಜನರ ಮನ ಗೆದ್ದಿದ್ದರು.
ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಲಕ್ಷ್ಮಣ ಸವದಿ ಬಿಜೆಪಿ ಸೇರ್ಪಡೆಗೊಂಡಿದ್ದರಿಂದ ಧರೆಪ್ಪ ಅವರಿಗೆ ಟಿಕೆಟ್ ಕೈ ತಪ್ಪಿದೆ. ಟಿಕೆಟ್ ಸಿಗದೇ ಇದ್ದರಿಂದ ತೀವ್ರ ಅಸಮಾಧಾನ ಹೊಂದಿದ್ದ ಅವರನ್ನು ಸೆಳೆಯುವಲ್ಲಿ ರಮೇಶ ಜಾರಕಿಹೊಳಿ ಅವರು ಯಶಸ್ವಿ ಆಗಿರುವುದು ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪಾಲಿಗೆ ಭಾರಿ ಅನುಕೂಲವಾದಂತಾಗಿದೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *