Breaking News

ಬೆಳಗಾವಿಯಲ್ಲಿ 70 ರೌಡಿಶೀಟರ್ ಮನೆ ಮೇಲೆ ದಾಳಿ !

ಬೆಳಗಾವಿ :ಬೆಳಗಾವಿ ನಗರದಲ್ಲಿ ಡಿಸಿಪಿ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ಬೆಳಗ್ಗೆ ಒಟ್ಟು 70 ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ಕೈಗೊಳ್ಳಲಾಗಿದೆ.

ಎಸಿಪಿ ಅಪರಾಧ ಮತ್ತು ಮಾರ್ಕೆಟ್‌ , ಖಡೇಬಜಾರ , ಹಾಗೂ ಬೆಳಗಾವಿ ಗ್ರಾಮೀಣ ಉಪವಿಭಾಗದ ಎಸಿಪಿ ಅವರು ಹಾಗೂ ನಗರದ ಎಲ್ಲ ಠಾಣೆಯ ಪಿಐ ಹಾಗೂ ಸಿಬ್ಬಂದಿಯವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

ದಾಳಿ ಕಾಲಕ್ಕೆ ಖಡೇಬಜಾರ ಪೊಲೀಸ್ ಠಾಣಾ ಹದ್ದಿಯ ಜಾಲಗಾರ ಗಲ್ಲಿಯಲ್ಲಿ ವಾಸಿಸುತ್ತಿದ್ದ ಒಬ್ಬ ರೌಡಿ ಶೀಟರ್ ಮನೆಯ ಮೇಲೆ ದಾಳಿ ಮಾಡಿ ಪರಿಶೀಲಿಸಿದಾಗ , ಆತನ ಬಳಿ 02 ತಲವಾರಗಳು ಸಿಕ್ಕಿದ್ದು , ಅವುಗಳನ್ನು ಜಪ್ತಪಡಿಸಿಕೊಂಡು ಆತನ ವಿರುದ್ಧ ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ಚುನಾವಣೆಯು ಭಯಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸುವ ನಿಟ್ಟಿನಲ್ಲಿ ಹಾಗೂ ಬೆಳಗಾವಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಸಲುವಾಗಿ ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *