ಬೆಳಗಾವಿ- ಮುಖ್ಯಮಂತ್ರಿ ಸಿದ್ರಾಮಯ್ಯನವರು ಮಂಡಿಸಿದ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೆ ಬಂಪರ್ ಕೊಡುಗೆ ಸಿಗದಿದ್ದರೂ ಸಮಾಧಾನ ಪಡುವ ಕೆಲವು ನಿರ್ಧಾರಗಳನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗಿದೆ
ಪ್ರಸಕ್ತ ಬಜೆಟ್‍ನಲ್ಲಿ ಜಿಲ್ಲೆಗೆ
ರಾಮದುರ್ಗ ತಾಲೂಕಿನ 46 ಕೆರೆಗಳಿಗೆ ಘಟಪ್ರಭಾ ನದಿಯಿಂದ ನೀರು ಹರಿಸುವ ಸಾಲಾಪೂರ ಏತ ನೀರಾವರಿ ಯೋಜನೆಗೆ 540 ಕೋಟಿ ರೂ. ಸತ್ತಿಗೇರಿ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲು 210 ಕೋಟಿ ರೂ. ಅಥಣಿ ತಾಲೂಕಿನ 17 ಕೆರೆಗಳನ್ನು ಕೃಷ್ಣಾ ನದಿಯಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆಗೆ 137 ಕೋಟಿ ರೂ. ಅನುದಾನ ನೀಡಲಾಗಿದೆ
ಗೋಕಾಕ ತಾಲೂಕಿನ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ, ಕುಡಿಯುವ ನೀರು ಪೂರೈಕೆಗಾಗಿ ಹಾಗೂ ಮಾರ್ಕಂಡೇಯ ಕಾಲುವೆಯಡಿ ಬಿಟ್ಟು ಹೋದ ಅಚ್ಚುಕಟ್ಟಿನ ನೀರಾವರಿಗಾಗಿ 250 ಕೋಟಿ ರೂ.ಅನುದಾನ ನೀಡಲಾಗಿದೆ
ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ ಸಂಗೊಳ್ಳಿ ಹಾಗೂ ನಂದಗಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 267 ಕೋಟಿ ರೂ. ನೀಡಲಾಗಿದೆ
ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಹೊಸದಾಗಿ ಬಿ.ಎಸ್ಸಿ(ಸಕ್ಕರೆ ತಂತ್ರಜ್ಞಾನ) ಪದವಿ ಕೋರ್ಸ ಆರಂಭಿಸಲು ಸರ್ಕಾರ ನಿರ್ಧರಿಸಿದೆ
3 ಕೋಟಿ ವೆಚ್ಚದಲ್ಲಿ ಮಿನಿ 3-ಡಿ ತಾರಾಲಯವನ್ನು ಬೆಳಗಾವಿಯಲ್ಲಿ ಸ್ಥಾಪನೆ ಮಾಡುತ್ತಿರುವದು ಸಂತಸದ ಸಂಗತಿಯಾಗಿದೆ