Breaking News

17 ಕೋಟಿ ವೆಚ್ಚದಲ್ಲಿ ಬೆಳಗಾವಿ ಪೋಲೀಸ್ ಆಯುಕ್ತರ ಸುಸಜ್ಜಿತ ಕಟ್ಟಡ- ಬೊಮ್ಮಾಯಿ

ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ
————————————————————–
17 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಸಚಿವ ಬೊಮ್ಮಾಯಿ

ಬೆಳಗಾವಿ, ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿಯನ್ನು ನಿರ್ಮಿಸಲಾಗುವುದು ಎಂದು ಗೃಹ ಇಲಾಖೆಯ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಕಾಲೇಜು ರಸ್ತೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಮಂಗಳವಾರ (ಡಿ.1) ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಪೊಲೀಸ್ ಆಯುಕ್ತರ ಕಚೇರಿ ನಿರ್ಮಿಸಿಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ನಗರದಲ್ಲಿಯೇ ಎರಡು ಎಕರೆ ಜಾಗೆ ಲಭ್ಯವಿತುವುದರಿಂದ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಬೆಳಗಾವಿ ಮಹಾನಗರಕ್ಕೆ ತಕ್ಕಂತೆ ಎಲ್ಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡವನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು.
ಇದಾದ ಬಳಿಕ ಕಟ್ಟಡದ ನೀಲನಕ್ಷೆ ವೀಕ್ಷಿಸಿದ ಸಚಿವ ಬಸವರಾಜ ಬೊಮ್ಮಾಯಿ ಅವರು, ಕೆಲ ಸಣ್ಣಪುಟ್ಟ ಮಾರ್ಪಾಡು ಮಾಡುವಂತೆ ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಪಿ. ಎಡಿಜಿಪಿ ಅಲೋಕ್ ಕುಮಾರ್, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತರಾದ ಕೆ.ತ್ಯಾಗರಾಜನ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
*****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *