ಬೆಳಗಾವಿ-
ಸಿಆರ್‌ಪಿಎಪ್ ಯೋಧ ಸಚಿನ್ ಮೇಲೆ ಕೇಸ್ ದಾಖಲು ಮಾಡಿದ ಪ್ರಕರಣಕ್ಕೆ ಸಮಂಧಿಸಿಂತೆ
ಕರ್ತವ್ಯದಲ್ಲಿ ಲೋಪ ಆರೋಪದಡಿ ಸದಲಗಾ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್ ಮಾಡಲಾಗಿದೆ.
ಯೋಧನ ಗಲಾಟೆ ಪ್ರಕರಣದ ಸಮಸ್ಯೆಯನ್ನು ಸರಿಯಾಗಿ ನಿರ್ವಹಣೆ ಮಾಡದ ಹಿನ್ನಲೆ ಪಿಎಸ್ಐ ಅನಿಲ ಕುಮಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಹೇಳಿದ್ದಾರೆ.
ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.
ಯೋಧ ಸಚಿನ್ ಬಿಡುಗಡೆಯಾದ ಬಳಿಕ ಆತನಿಂದ ಹೇಳಿಕೆ ಪಡೆದಿದ್ದು. ಪ್ರಾಥಮಿಕ ತನಿಖೆಯಲ್ಲಿ ಪಿಎಸ್ಐ ಅನಿಲಕುಮಾರ್ ಕರ್ತವ್ಯ ಲೋಪ ಕಂಡುಬಂದಿದ್ದು ಅವಮಾನತ್ತು ಮಾಡಲಾಗಿದೆ. ಘಟನೆ ನಡೆದ ದಿನವೇ ಸಿಆರ್‌ಪಿಎಪ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು.
ಮಾರನೇ ದಿನ ಸಿಆರ್‌ಪಿಎಪ್ ಅಧಿಕಾರಿಗೆ ಪತ್ರ ಬರೆದು ರವಾನಿಸಲಾಗಿತ್ತು. ತನಿಖೆ ಮುಂದುವರೆದಿದ್ದು ಪೇದೆಗಳ ತಪ್ಪು ಮಾಡಿರುವ ಕುರಿತು ಕೂಡ ವಿಚಾರಣೆ ನಡೆದಿದೆ.ಬೆಳಗಾವಿಯಲ್ಲಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಹೇಳಿದ್ದಾರೆ.