Breaking News

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಈಗ ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 28 ರಂದು ಬೆಳಗಾವಿಗೆ ಬರುವ ಮಹೂರ್ಥ ಫಿಕ್ಸ್ ಆಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಜಿಲ್ಲೆಗೆ ಬರೋದು ಫಿಕ್ಸ್ ಆಗಿತ್ತು. ಆದ್ರೆ ಅವರು ಬೆಳಗಾವಿ ನಗರಕ್ಕೆ ಬರ್ತಾರೋ ಅಥವಾ ಚಿಕ್ಕೋಡಿ ಕ್ಷೇತ್ರಕ್ಕೆ ಬರ್ತಾರೋ ಎನ್ನುವದು ನಿಗೂಢವಾಗಿತ್ತು ಆದ್ರೆ ಬಿಜೆಪಿಯ ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್ 28 ರಂದು ಬೆಳಗಾವಿಗೆ ಬರೋದು ಫಿಕ್ಸ್ ಆಗಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಬರುವ ದಿನಾಂಕ ನಿಗದಿ ಆಗುತ್ತಿದ್ದಂತೆಯೇ ಪೋಲೀಸ್ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಸಿದ್ಧತೆಗಳನ್ನು ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *