ಬೆಳಗಾವಿ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರ ದಾಳಿ. ಮಾಡಿ ಅಪಾರ ಪ್ರಮಾಣದ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ
ಡಿಸಿಪಿಗಳಾದ ಅಮರನಾಥ ರೆಡ್ಡಿ ಮತ್ತು ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿ. ನಡೆಸಿದ ಪೋಲೀಸರ ತಂಡ ಗಾಂಜಾ ವಶಪಡಿಸಿಕೊಂಡಿದೆ
ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ದಾಳಿ ಮಾಡಲಾಗಿದ್ದು ತರಕಾರಿ ಬೆಳೆಯ ಮದ್ಯದಲ್ಲಿ ಗಾಂಜಾ ಬೆಳೆಯಲಾಗಿತ್ತು.
ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆದಿದೆ
ಜಮೀನು ಮಾಲೀಕ ನಿಂಗಪ್ಪ ಚೌಗಲಾ ವಶಕ್ಕೆ ಪಡೆದುಕೊಂಡಿರುವ ಪೋಲೀಸರು. ೬ ಕೆಜಿ ಗಾಂಜಾ ಸೊಪ್ಪು ಜಪ್ತಿ. ಮಾಡಿಕೊಂಡಿದ್ದಾರೆ
ಬೆಳಗಾವಿ ಪೋಲೀಸರು ಗಾಂಜಾ ಮಾರಾಟದ ವಿರುದ್ಧ ಸಮರ ಸಾರಿದ್ದು ಗಾಂಜಾ ಬೆಳೆಯುವ ಖದೀಮರನ್ನು ಜೈಲಿಗಟ್ಟುವ ಕೆಲಸ ಮಾಡುತ್ತಿರುವದು ಸಂತಸದ ಸಂಗತಿಯಾಗಿದೆ
ಮಾರಿಹಾಳ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ