ಬೆಳಗಾವಿ- ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮುಖ್ಯಪಾತ್ರವಹಿಸಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮಹಾರಾಷ್ಟ್ರ ಬಿಜೆಪಿಯಿಂದ ಬುಲಾವ್ ಬಂದಿದೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತುರ್ತಾಗಿ ಮುಂಬಯಿ ಗೆ ತೆರಳಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಮಹಾರಾಷ್ಟ್ರ ದಲ್ಲಿ ಬಿಜೆಪಿ ಸರ್ಕಾರ ರಚಿಸುವ ಮಹತ್ವದ ಜವಾಬ್ದಾರಿಯನ್ನು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊಡಲಾಗಿದ್ದು ಅವರು ಎರಡನೇಯ ಬಾರಿ ದೇವೇಂದ್ರ ಫಡ್ನವಿಸ್ ಜೊತೆ ಚರ್ಚೆ ನಡೆಸಿದ್ದು,ಮಹಾರಾಷ್ಟ್ರದ ಶಿವಸೇನೆ,ಕಾಂಗ್ರೆಸ್ ,ಮತ್ತು ಶರದ್ ಪವಾರ್ ಅವರ ರಾಷ್ಟ್ರವಾದಿ ಮೈತ್ರಿ ಸರ್ಕಾರಕ್ಕೆ ನಡುಕ ಶುರುವಾಗಿದೆ.
ಕರ್ನಾಟಕದಲ್ಲಿ ಪ್ರಯೋಗಿಸಿದ,ಪಾಲಿಟಿಕ್ಸ್ ಫಾರ್ಮುಲಾ ಮಹಾರಾಷ್ಟ್ರದಲ್ಲೂ ಪ್ರಯೋಗಿಸಲು ಬಿಜೆಪಿ ತಂತ್ರ ರೂಪಿಸಿದ್ದು,ತಂತ್ರ ಸಫಲವಾಗಲು ರಮೇಶ್ ಸಾಹುಕಾರ್ ಅವರೇ ಮಂತ್ರ ಜಪಿಸಲು ಮುಂದಾಗಿದ್ದಾರೆ
ಮಹಾರಾಷ್ಟದ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಕಸರತ್ತು ನಡೆಸಿದ್ದು,ಮಹಾರಾಷ್ಟ್ರದಲ್ಲೂ ಸಾಹುಕಾರ್ ಕೈಚಳಕ ತೋರಿಸಲಿದ್ದಾರೆ.