ಬೆಳಗಾವಿ- ಇತ್ತೀಚಿಗೆ ಬೆಳಗಾವಿಯಲ್ಲಿ ನಾಗರಾಜ್ ಗಾಡಿವಡ್ಡರ್ ಎಂಬ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು.
ಬೆಳಗಾವಿಯ ವಿವಿಧ ಸಂಘಟನೆಗಳ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿದರು.ಇತ್ತೀಚಿಗೆ ಬೆಳಗಾವಿಯ ಶಿವಬಸವ ನಗರ ಪ್ರದೇಶದಲ್ಲಿ ನಾಗರಾಜ್ ಗಾಡಿವಡ್ಡರ್ ಎಂಬ ಯುವಕನನ್ನು ಮೂರು ಜನ ದುಷ್ಕರ್ಮಿಗಳು ಸೇರಿಕೊಂಡು ಅಮಾನುಷವಾಗಿ ಹತ್ಯೆ ಮಾಡಿದ್ದು, ಪೋಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಅಮಾನುಷವಾಗಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವ ರೀತಿಯಲ್ಲಿ ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಶಿಕ್ಷೆಯಾಗಲು ಎನೆಲ್ಲ ಪುರಾವೆಗಳು ಬೇಕು,ಅವುಗಳನ್ನೆಲ್ಲ ಕಲೆಹಾಕಿ ನ್ಯಾಯಾಲಯಕ್ಕೆ ಒಪ್ಪಿಸುವ ನಿಟ್ಟಿನಲ್ಲಿ ಸೂಕ್ತ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು.
ಇತ್ತೀಚಿಗೆ ಬೆಳಗಾವಿ ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ,ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು,ಈ ವಿಚಾರದಲ್ಲಿ ಅಪರಾಧಿಗಳಿಗೆ ಭಯ ಹುಟ್ಟಿಸುವ ಸಂದೇಶ ನೀಡುವ ಶಿಕ್ಷೆ ಆಗುವದು ಅತ್ಯಗತ್ಯವಾಗಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.