Breaking News

ಮದ್ಯರಾತ್ರಿ,ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ

ಬೆಳಗಾವಿ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ  ಕ್ರಾಂತಿಯ ಕಹಳೆ ಊದಿದ್ದಾರೆ.

ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು ಇಂದು ಮೂರ್ತಿ ಪ್ರತಿಷ್ಠಾಪನೆ ಮಾಡಿ,ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿ,ಕ್ರಾಂತಿವೀರ,ಶೂರ,ಧೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗುವ ಮೂಲಕ ರಾತ್ರಿ ವಿಜಯೋತ್ಸವ ಆಚರಿಸಿದ್ದಾರೆ.

ಗುರುವಾರ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಿ ದೊಡ್ಡ ಹೋರಾಟವೇ ನಡೆದಿತ್ತು,ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ‌ ಅವರು 29 ರಂದು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ಸರು,ಆದರೆ ಮಧ್ಯರಾತ್ರಿ, ರಾಯಣ್ಣನ ಸೇನಾನಿಗಳು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಗೋರಿಲ್ಲಾ ಯುದ್ಧದ ಮಾದರಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.ವಿವಾದವನ್ನು ಅಂತ್ಯಗೊಳಿಸಿದ್ದಾರೆ.

ಪೀರನವಾಡಿ ಸರ್ಕಲ್ ಗೆ ರಾಯಣ್ಣನ ಅಭಿಮಾನಿಗಳು ಕ್ಷಣಾರ್ಧದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿ,ಜಯಘೋಷಗಳನ್ನು ಹಾಕಿ,ಮೂರ್ತಿ ವಿವಾದಕ್ಕೆ ಅಂತ್ಯ ಹಾಡಿದ್ದಾರೆ.,ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ವಿಷಯ ಪೋಲೀಸರಿಗೆ ಗೊತ್ತಾಗುತ್ತಿದ್ದಂತೆಯೇ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *