ಬೆಂಗಳೂರು- ಬೆಳಗಾವಿ– ಪೀರನವಾಡಿಯ ರಾಯಣ್ಣನ ಮೂರ್ತಿ ವಿವಾದ ಈಗ ಮುಖ್ಯಮಂತ್ರಿಗಳ ಸಚಿವಾಲಯಕ್ಕೂ ತಲುಪಿದ್ದು ಅಭಿಮಾನಿಗಳು ಸೂಚಿಸಿರುವ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವದು ಎಂದು ಮುಖ್ಯಂಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ನಿರಜನಾನಂದ ಶ್ರೀಗಳ ನೇತ್ರತ್ವದಲ್ಲಿ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಇಂದು ಗೃಹ ಕಚೇರಿಯಲ್ಲಿ ಭೇಟಿ ಮಾಡಿತು. ಬೆಳಗಾವಿ ಪಕ್ಕದ ಪೀರನವಾಡಿಯಲ್ಲಿ ಅಭಿಮಾನಿಗಳು ಗುರುತಿಸಿರುವ ಸ್ಥಳದಲ್ಲೇ ಮೂರ್ತಿ ಪ್ರತಿಷ್ಠಾಪನೆ ಮಾಡುವದಾಗಿ ಸಿಎಂ ಯಡಿಯೂರಪ್ಪ ನಿಯೋಗಕ್ಕೆ ಭರವಸೆ ನೀಡಿದ್ದಾರೆ
ಪೀರನವಾಡಿ ಮೂರ್ತಿ ವಿವಾದವನ್ನು ಸರ್ಕಾರ ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.ಶೀಘ್ರದಲ್ಲೇ ವಿವಾದ ಸುಖಾಂತ್ಯಗೊಳ್ಳಲಿದೆ ಎಂದು ಸಿಎಂ ಯಡಿಯೂರಪ್ಪ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಪಸ್ಥಿತರಿದ್ದರು.
ಇತ್ತ ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳ ಜೊತೆ ಸಭೆ ನಡೆಸಿ ತ್ವರಿತಗತಿಯಲ್ಲಿ ವಿವಾದ ಬಗೆಹರಿಸಲು ಸೂಚನೆ ನೀಡಿದ್ದಾರೆ.