ಬೆಳಗಾವಿ- ರಾಜ್ಯದಲ್ಲಿ ಸ್ಕೌಟ್ ಆ್ಯಂಡ್ ಗೈಡ್ಸ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಪೆÇಲೀಸ್ ಇಲಾಖೆಯ ಭರ್ತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸ್ಕೌಟ್ ಆ್ಯಂಡ್ ಗೈಡ್ಸ್ ರಾಜ್ಯ ಸಮಿತಿ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂದ್ಯಾ, ತಿಳಿಸಿದ್ದಾರೆ
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಬಳಿಕ ಮಾದ್ಯಮಗಳ ಜತೆ ಮಾತನಾಡಿದ ಅವರು ಸ್ಕೌಟ್ ಆ್ಯಂಡ್ ಗೈಡ್ಸ್ ತರಬೇತಿ ಕೇಂದ್ರ ಸ್ಥಾಪನೆಗೆ ಖಾನಾಪುರದಲ್ಲಿ 10 ಎಕರೆ ಜಮೀನು ಗುರುತಿಸಲಾಗಿದೆ. ಆ ಕೇಂದ್ರವನ್ನು ರಾಷ್ಟ್ರಮಟ್ಟದ ತರಬೇತಿ ಶಿಬಿರ ನಡೆಯುವ ರೀತಿಯಲ್ಲಿ ನಿರ್ಮಿಸಲಾಗುವುದು ಎಂದು ಶಿಂದ್ಯಾ ತಿಳಿಸಿದರು.
ವಸತಿ ಶಾಲೆಗಳಲ್ಲೂ ತರಬೇತಿ ಘಟಕ ಆರಂಭಿಸಲು ಸಿದ್ಧತೆ ನಡೆಸಲಾಗಿದ್ದು, ಒಟ್ಟಾರೆ ತರಬೇತಿಗಾಗಿ 1.5 ಕೋಟಿ ರೂ. ಮೀಸಲಿಡಲಾಗಿದೆ. ಅಲ್ಲದೆ ಸಂಸ್ಥೆಯಿಂದ ಪ್ರತಿ ವರ್ಷ ರಾಜ್ಯದ ಮೂರು ಸಾವಿರ ವಿದ್ಯಾರ್ಥಿಗಳಿಗೆ `ಕರ್ನಾಟಕ ದರ್ಶನ’ ಪ್ರವಾಸಕ್ಕೆ ಅವಕಾಶ ಇತ್ತು. ಈ ವರ್ಷ ಅದನ್ನು ಐದು ಸಾವಿರಕ್ಕೆ ಏರಿಸಲಾಗಿದೆ ಎಂದರು.
ರಾಜ್ಯದ 17 ವಿಶ್ವ ವಿದ್ಯಾಲಯಗಳಲ್ಲಿ ಸ್ಕೌಟ್ ಆ್ಯಂಡ್ ಗೈಡ್ಸ್ ಘಟಕ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದ್ದು, ಈಗಾಗಲೇ 14 ವಿವಿಗಳಲ್ಲಿ ಸಂಯೋಜನಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸ್ಕೌಟ್ ಆ್ಯಂಡ್ ಗೈಡ್ಸ್ ರಾಜ್ಯ ಸಮಿತಿ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂದ್ಯಾ ತಿಳಿಸಿದರು.
ಜಿಲ್ಲಾಧಿಕಾರಿ ಜೈರಾಂ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ