Home / ಬೆಳಗಾವಿ ನಗರ / ಪ್ರೇಮಿಗಳ ದಿನಾಚರಣೆಗೆ ಶ್ರೀರಾಮ ಸೇನೆ ವಿರೋಧ

ಪ್ರೇಮಿಗಳ ದಿನಾಚರಣೆಗೆ ಶ್ರೀರಾಮ ಸೇನೆ ವಿರೋಧ

ಬೆಳಗಾವಿ- ಫೆ ೧೪ ರಂದು ಆಚರಿಸುವ ಪ್ರೇಮಿಗಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಆಗ್ರಹಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು

ಪ್ರೇಮಿಗಳ ದಿನ ಆಚರಿಸುವದು ಪಾಶ್ಚಿಮಾತ್ಯ ಸಂಸ್ಕೃತಿಯಾಗಿದ್ದು ಭಾರತೀಯ ಯುವಕರು ಪರದೇಶಿ ಸಂಸ್ಕೃತಿಯನ್ನು ದಿಕ್ಕರಿಸಿ ಹಿಂದು ಸಂಸ್ಕೃತಿಯ ರಕ್ಷಣೆ ಮಾಡಬೇಕು ಪ್ರೇಮಿಗಳ ದಿನದಂದು ನಗರ ಮತ್ತು ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ನೀಡಬಾರದು ಎಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಒತ್ತಾಯಿಸಿದರು

ಪ್ರೇಮಿಗಳ ದಿನದ ಬದಲಾಗಿ ಸಹೋದರಿಯರ ದಿನ,ಮಾತಾ, ಪಿತರ ದಿನ ಆಚರಿಸಿ ಹಿಂದೂ ಸಂಸ್ಕೃತಿಯನ್ನು ಅನುಸರಿಸಬೇಕು ಯುವಕರು ಪ್ರೇಮಿಗಳ ದಿನ ಆಚರಿಸದೇ ಹಿಂದೂ ಸಂಸ್ಕೃತಿಯ ರಕ್ಷಣೆ ಮಾಡಬೇಕು ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ರಾಮಾಕಾಂತ ಕುಂಡಸ್ಕರ್ ಮನವಿ ಮಾಡಿಕೊಂಡರು

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *