ಬೆಳಗಾವಿ-
*ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 496 ವಾಹನಗಳ ಸೀಜ್* ಮಾಡಲಾಗಿದ್ದು, ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ 66 ಎಫ್ಐಆರ್ ಪ್ರಕರಣಗಳು ದಾಖಲಾಗಿವೆ ಎಂದು ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ,ನಿಂಬರಗಿ ತಿಳಿಸಿದ್ದಾರೆ.
ಲಾಕ್‌ಡೌನ್ ಉಲ್ಲಂಘಿಸಿದ 66 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಜಿಲ್ಲೆಯಲ್ಲಿ ಕಟ್ಡು ನಿಟ್ಟಾಗಿ ಲಾಕ್ ಡೌನ್ ಮಾಡಿದ್ದೇವೆ ಎಂದು ಬೆಳಗಾವಿ ಎಸ್‌ಪಿ ಲಕ್ಷ್ಮಣ್ ನಿಂಬರಗಿ ಹೇಳಿದರು.
ಯಾರೂ ಸಹ ಲಾಕ್‌ಡೌನ್ ಆದೇಶ ಉಲ್ಲಂಘಿಸಬಾರದು ಲಾಕ್‌ಡೌನ್ ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ.
ನಿಮ್ಮ ಆರೋಗ್ಯದ ಹಿತದೃಷ್ಟಿಯಿಂದ ಲಾಕ್‌ಡೌನ್‌ಗೆ ಆದೇಶ ನೀಡಲಾಗಿದ್ದು ಅದನ್ನು ಪಾಲಿಸುವಂತೆ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿಕೊಂಡರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ