ಬೆಳಗಾವಿ- SSLC ಪರೀಕ್ಷೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ಮಾಡಲು,ಬೆಳಗಾವಿಗೆ ಬರುತ್ತಿದ್ದ, ವಾಟಾಳ್ ನಾಗರಾಜ್ ಅವರನ್ನು ಹಿರೇಬಾಗೇವಾಡಿ ಟೀಲ್ ಬಳಿ ತಡೆದ ಪೋಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಧರಣಿಗೆ ಮುಂದಾಗಿದ್ದ ವಾಟಾಳ್ ನಾಗರಾಜ್ ಅವರು ಕಾರಿನಲ್ಲಿ ಬರುವಾಗ,ಹಿರೇಬಾಗೇವಾಡಿ ಟೋಲ್‌ಗೇಟ್ ಬಳಿಯೇ ವಾಟಾಳ್ ನಾಗರಾಜ್ ಅವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಸುವರ್ಣ ಸೌಧದ ಮುಂಭಾಗದಲ್ಲಿ ಧರಣಿಗೆ ಅವಕಾಶ ನಿರಾಕರಣೆ ಮಾಡಿದ ಪೋಲೀಸರು ವಾಟಾಳ್ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, SSLC, ಪದವಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು,
9 ಲಕ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಜತೆಗೆ ಚೆಲ್ಲಾಟ ಬೇಡ, ವಿದ್ಯಾರ್ಥಿಗಳು ಭಯದಿಂದಲೇ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆದಿದ್ದಾರೆ,
ದೇಶದ 12 ರಾಜ್ಯದಲ್ಲಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ಮಾ ಡಲಾಗಿದೆ,ಕರ್ನಾಟಕದಲ್ಲೂ ಪರೀಕ್ಷೆ ರದ್ದು ಮಾಡಬೇಕೆಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.
ಸುವರ್ಣ ಸೌಧದ ಬಳಿ ಧರಣಿಗೆ ಪೊಲೀಸರು ಅವಕಾಶ ನೀಡಿಲ್ಲ, ಇದೇ ತಿಂಗಳು 23 ರಂದು ಶಿಕ್ಷಣ ಸಚಿವ ಸುರೇಶಕುಮಾರ ಮನೆ ಮುಂದೆ ಧರಣಿ ಮಾಡುತ್ತೇನೆ.
ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಮುಂದೆ ಧರಣಿ ನಡೆಸುವೆ,ಎಂದು ವಾಟಾಳ್ ತಿಳಿಸಿದ್ದಾರೆ.